ಮೈಸೂರು: ಧರ್ಮಸ್ಥಳ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯನ್ನು ಜನತಾ ಪಕ್ಷದ ಅಧ್ಯಕ್ಷೆ ಬಿ.ಟಿ.ಲಲಿತಾನಾಯಕ್ ಖಂಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಸಮೀಪ ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ದೌರ್ಜನ್ಯ ಎಸಗಿದ್ದರೂ ಧರ್ಮಾಧಿಕಾರಿಯವರು ದನಿ ಎತ್ತದೆ ಸುಮ್ಮನಿದ್ದಾರೆ. ಧರ್ಮಸ್ಥಳ, ತಿರುಪತಿಗಳು ತಲೆ ಬೋಳಿಸಿ ಕಾಣಿಕೆ ಪಡೆಯುವುದಕ್ಕಾಗಿ ಮಾತ್ರವೇ ಇವೆಯೆ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.