Breaking News

ಕಾಡುಕುರುಬ ಜಾತಿ ಪ್ರಮಾಣ ಅಕ್ರಮವಾಗಿ ಪಡೆದ ಆರೋಪ

Spread the love

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ವಿರುದ್ಧ ನಕಲಿ ಜಾತಿ ಪ್ರಮಾಣಪತ್ರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪಯ್ಯಗೆ ಮತ್ತೆ ಸಂಕಷ್ಟ ಆರಂಭವಾಗಿದೆ. ದಶಕಗಳ ಹಿಂದಿನ ಕೆಂಪಯ್ಯ ಪ್ರಕರಣ ಸಂಬಂಧ ಮತ್ತೆ ವಿಚಾರಣೆ ಶುರುವಾಗಿದೆ. ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಕೆಂಪಯ್ಯಗೆ ನೋಟಿಸ್ ಜಾರಿ ಮಾಡಿದೆ. ಪೂರಕ ದಾಖಲೆ ಜತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.
ಕೆಂಪಯ್ಯ ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಐಪಿಎಸ್ ಹುದ್ದೆಗೇರಿದ್ದ ಆರೋಪ ಕೇಳಿ ಬಂದಿತ್ತು. ನಿವೃತ್ತ ಐಪಿಎಸ್ ಅಧಿಕಾರಿ ಕುರುಬ ಜಾತಿಗೆ ಸೇರಿದವರಾಗಿದ್ದಾರೆ. ಆದರೆ ಕಾಡು ಕುರುಬರು ಎಂದು ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದಾರೆಂಬ ಆರೋಪವಿತ್ತು. ಪರಿಶಿಷ್ಟ ಪಂಗಡ ಕೋಟಾದಡಿ ಐಪಿಎಸ್ ಹುದ್ದೆಗೆ ಏರಿರುವ ಆರೋಪವಿದೆ. ಈ ಬಗ್ಗೆ ದಶಕಗಳ ಹಿಂದೆಯೇ ಕೆಂಪಯ್ಯ ವಿರುದ್ಧ ದೂರು ದಾಖಲಾಗಿತ್ತು. ನಂತರ ಕೆಂಪಯ್ಯ ವಿರುದ್ಧದ ದೂರಿನ ಬಗ್ಗೆ ವಿಚಾರಣೆ ನಡೆಸಿರಲಿಲ್ಲ. ಫೈಲ್ ಪತ್ತೆಯಾದ ನಂತರ ಮತ್ತೆ ವಿಚಾರಣೆಗೆ ಬಂದ ಪ್ರಕರಣ. ಸೂಕ್ತ ದಾಖಲೆಗಳ ಜತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಡಿಸಿಆರ್ಬಿ ಕೇಂದ್ರ ಕಚೇರಿಯಲ್ಲಿ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಎದುರು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯಗೆ ಡಿಸಿಆರ್ ಪಿ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಡಾ.ಪಿ.ರವೀಂದ್ರರಿಂದ ನೋಟಿಸ್ ಜಾರಿಯಾಗಿದೆ.ý


Spread the love

About gcsteam

    Check Also

    ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    Spread the loveಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ …

    Leave a Reply