ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ. ಜೊತೆಗೆ ಪ್ರಧಾನಿ ಸಭೆ ಬಳಿಕ ಮತ್ತೊಂದು ಸಭೆ ಸೇರಿ ಪ್ರಧಾನಿ ನೀಡುವ ನಿರ್ದೇಶನಗಳನ್ನು ಆಧರಿಸಿ ಮುಂದುವರೆಯುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣ ಸ್ಥಿತಿಗತಿ ಕುರಿತು ಅವಲೋಕಿಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಆರೋಗ್ಯ ಸಚಿವ ಸುಧಾಕರ್, ಕೋವಿಡ್ ನಾಲ್ಕನೇ ಅಲೆ ಬರಬಹುದೆಂಬ ಸಾಧ್ಯತೆ ಹಿನ್ನೆಲೆಯನ್ನು ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದೇವೆ.ಪ್ರಮುಖವಾಗಿ ಕೆಲವು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಡ್ಡಾಯವಾಗಿ ಮಾಸ್ಕ್ ಧರಿಸಲು ಮಾರ್ಗಸೂಚಿ ಹೊರಡಿಸುತ್ತೇವೆ, ಪ್ರಧಾನಿ ವರ್ಚುಯಲ್ ಸಭೆ ಬಳಿಕ ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ ಎಂದರು. ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದರೂ ಸದ್ಯಕ್ಕೆ ದಂಡ ವಿಧಿಸಲ್ಲ ಅದನ್ನ ಮುಂದಿನ ದಿನಗಳಲ್ಲಿ ಪರಿಶೀಲಿಸಿ ನಿರ್ಧರಿಸಲಾಗುತ್ತದೆ.
ಶೇ.1.9ರಷ್ಟು ಪ್ರಮಾಣದಲ್ಲಿ ಪಾಸಿಟಿವಿಟಿ ದರ ಬೆಂಗಳೂರಿನಲ್ಲಿ ದಾಖಲಾಗಿದೆ. ಹಾಗಾಗಿ ಲಸಿಕೆ, ಬೂಸ್ಟರ್ ಲಸಿಕೆ ಹಾಕಿಸಿಕೊಳ್ಳಲು ಜನತೆಗೆ ಮನವಿ ಮಾಡುತ್ತಿದ್ದೇವೆ, ನಾಲ್ಕನೇ ಅಲೆವರೆಗೆ ಕಾಯದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಕರೆ ನೀಡಿದರು.ಸಿಎಂ ನೇತೃತ್ವದಲ್ಲಿ ಸಭೆಸಿಎಂ ನೇತೃತ್ವದಲ್ಲಿ ಸಭೆದಕ್ಷಿಣ ಕೊರಿಯಾ, ಥಾಯ್ಲೆಂಡ್, ಜಪಾನ್ಗಳಿಂದ ಬೆಂಗಳೂರಿಗೆ ಬರುವವರ ಮೇಲೆ ನಿಗಾ ಇರಿಸಬೇಕು, ಏರ್ಪೋರ್ಟ್ಗಳಲ್ಲಿ ನಿಗಾ ಇಡಲು ನಿರ್ಧರಿಸಲಾಗಿದೆ. ವಿದೇಶಿ ಪ್ರವಾಸ ಹಿನ್ನೆಲೆಯವರ ಮೇಲೆ ನಿಗಾ ಇಡಲು ಸೂಚನೆ ನೀಡಲು ನಿರ್ಧರಿಸಲಾಗಿದೆ. ಲ್ಯಾಬ್ ವರದಿ ಬರುವವರಗೆ ರಾಜ್ಯದಲ್ಲಿ ಯಾವ ತಳಿ ಇದೆ ಅಂತ ಹೇಳೋದಿಕ್ಕೆ ಆಗಲ್ಲ. ಸದ್ಯ ಲ್ಯಾಬ್ ನವರು ಜಿನೋಮಿಕ್ ಸೀಕ್ವೆನ್ಸ್ಗೆ ಮಾದರಿ ಪಡೆದಿದ್ದಾರೆ ಅದರ ವರದಿ ಬರಲಿದೆ. ಒಮಿಕ್ರಾನ್ನ ತಳಿಯೇ ಆದರೆ, ರೋಗ ಲಕ್ಷಣಗಳು ಒಂದೇ ಇರುತ್ತವೆ. ವರದಿ ಬರುವವರೆಗೂ ಕಾದು ನೋಡಬೇಕು ಎಂದರು.
ದೆಹಲಿ, ಮಹಾರಾಷ್ಟ್ರ, ಕೇರಳ, ತಮಿಳುನಾಡುಗಳಿಂದ ಬರುವವರ ವಿಚಾರದ ಬಗ್ಗೆ ಏಪ್ರಿಲ್ 27 ರ ಬಳಿಕ ಸಭೆ ನಡೆಸಲಾಗುತ್ತದೆ. ಪ್ರಧಾನಿ ಸಭೆ ಬಳಿಕ ಮತ್ತೊಂದು ಸಭೆ ಸೇರುತ್ತೇವೆ. ಪ್ರಧಾನಿಯವರು ನೀಡುವ ನಿರ್ದೇಶನಗಳನ್ನು ನೋಡಿಕೊಂಡು ಮುಂದುವರೆಯುತ್ತೇವೆ. ಆ ರಾಜ್ಯಗಳಿಂದ ಬರುವವರ ಮೇಲೆ ಯಾವ ರೀತಿ ನಿಗಾ ಇಡಬೇಕೆಂದು ಆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.ಎಲ್ಲ ಪಕ್ಷಗಳೂ ಸಭೆ, ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸುಧಾಕರ ಹೇಳಿದರು.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …