ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ. ಜೊತೆಗೆ ಪ್ರಧಾನಿ ಸಭೆ ಬಳಿಕ ಮತ್ತೊಂದು ಸಭೆ ಸೇರಿ ಪ್ರಧಾನಿ ನೀಡುವ ನಿರ್ದೇಶನಗಳನ್ನು ಆಧರಿಸಿ ಮುಂದುವರೆಯುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣ ಸ್ಥಿತಿಗತಿ ಕುರಿತು ಅವಲೋಕಿಸಲಾಯಿತು. ಸಭೆ ಬಳಿಕ ಮಾಹಿತಿ ನೀಡಿದ ಆರೋಗ್ಯ ಸಚಿವ ಸುಧಾಕರ್, ಕೋವಿಡ್ ನಾಲ್ಕನೇ ಅಲೆ ಬರಬಹುದೆಂಬ ಸಾಧ್ಯತೆ ಹಿನ್ನೆಲೆಯನ್ನು ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದೇವೆ. ಪ್ರಮುಖವಾಗಿ ಕೆಲವು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಡ್ಡಾಯವಾಗಿ ಮಾಸ್ಕ್ ಧರಿಸಲು ಮಾರ್ಗಸೂಚಿ ಹೊರಡಿಸುತ್ತೇವೆ, ಪ್ರಧಾನಿ ವರ್ಚುಯಲ್ ಸಭೆ ಬಳಿಕ ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ ಎಂದರು. ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದರೂ ದಂಡ ವಿಧಿಸಲ್ಲ ಮುಂದಿನ ದಿನಗಳಲ್ಲಿ ಪರಿಶೀಲಿಸಿ ನಿರ್ಧರಿಸಲಾಗುತ್ತದೆ.
ಶೇ.1.9ರಷ್ಟು ಪ್ರಮಾಣದಲ್ಲಿ ಪಾಸಿಟಿವಿಟಿ ದರ ಬೆಂಗಳೂರಿನಲ್ಲಿ ದಾಖಲಾಗಿದೆ. ಹಾಗಾಗಿ ಲಸಿಕೆ, ಬೂಸ್ಟರ್ ಲಸಿಕೆ ಹಾಕಿಸಿಕೊಳ್ಳಲು ಜನತೆಗೆ ಮನವಿ ಮಾಡುತ್ತಿದ್ದೇವೆ, ನಾಲ್ಕನೇ ಅಲೆವರೆಗೆ ಕಾಯದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಕರೆ ನೀಡಿದರು.
Check Also
ವಿದ್ಯಾಮಂತ್ರಿಗೆ ಕನ್ನಡ ಬರಲ್ಲ” ಎಂದಿರುವ ವಿದ್ಯಾರ್ಥಿ ಮೇಲೆ ಇಂಗ್ಲೀಷ್ ನಲ್ಲೇ ಕ್ರಮಕ್ಕೆ ಸೂಚನೆ ಅಕ್ಷಮ್ಯ
Spread the loveಹುಬ್ಬಳ್ಳಿ: ‘ವಿದ್ಯಾಮಂತ್ರಿಗೆ ಕನ್ನಡ ಬರಲ್ಲ’ ಎಂದ ವಿದ್ಯಾರ್ಥಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷೆ ವಿಧಿಸಲು ಸೂಚಿಸಿರುವುದು …