ಹುಬ್ಬಳ್ಳಿ : ಬೆಂಗಳೂರಿನ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟನಿಂದ ಪ್ರಸಕ್ತ ಸಾಲಿನ ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿಗೆ ಉದ್ಯಮಿ-ಸಮಾಜ ಸೇವಕ ರಮೇಶ ಡಿ. ಮಹಾದೇವಪ್ಪ ಆಯ್ಕೆಯಾಗಿದ್ದಾರೆ. ಎಪ್ರಿಲ್ ದಿ 28 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗುವ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನನ ತ್ರಿ-ದಶಮಾನೋತ್ಸವ ಸಮಾರಂಭದಲ್ಲಿ ರಮೇಶ ಡಿ. ಮಹಾದೇವಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದು ಟ್ರಸ್ಟ್ ಅಧ್ಯಕ್ಷ , ಪತ್ರಕರ್ತ ರಮೇಶ ಸುರ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Check Also
*ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ- ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ
Spread the loveಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ …