ಕಲಬುರಗಿ: ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ. ಈ ಪ್ರಕರಣದಲ್ಲಿ ಆರೋಪಿಗಳು ಹೇಗೆಲ್ಲಾ ಅಕ್ರಮ ಎಸಗುತ್ತಿದ್ದರು ಎಂಬುವುದನ್ನು ಕಂಡು ಸಿಐಡಿ ಅಧಿಕಾರಿಗಳೇ ದಂಗಾಗಿದ್ದಾರೆ. ಅಕ್ರಮದ ಪ್ರಮುಖ ರೂವಾರಿ ಆರ್.ಡಿ ಪಾಟೀಲ್ ತಂಡ ಬ್ಲೂಟೂತ್ ಡಿವೈಸ್ ಬಳಸಿ ಪರೀಕ್ಷೆ ಬರೆಸುತ್ತಿದ್ದರು ಎಂಬುವುದನ್ನು ಈಗಾಗಲೇ ಪತ್ತೆ ಮಾಡಿದ್ದಾರೆ.
ಪ್ರಕರಣ ಸಂಬಂಧ ಆರ್.ಡಿ. ಪಾಟೀಲ್, ಮಹಾಂತೇಶ ಪಾಟೀಲ್ ಸೇರಿ ಹಲವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಒಂದೊಂದೇ ರೋಚಕ ಕತೆಗಳು ಬಯಲಾಗುತ್ತಿವೆ. ಮ್ಯಾಕ್ರೋ ಬ್ಲೂಟೂತ್, ಮೈಕ್ರೋ ಡಿವೈಸ್ ಬಳಸಿ ಅಭ್ಯರ್ಥಿಗಳಿಗೆ ಉತ್ತರ ಹೇಳಲು ಸಿಸ್ಟಮ್ಯಾಟಿಕ್ ಪ್ಲಾನ್ ಮಾಡುತ್ತಿದ್ದರು. ಪರೀಕ್ಷೆ ಅಕ್ರಮಕ್ಕೆ ಡಿವೈಸ್ ಎಕ್ಸ್ಪರ್ಟ್ ಟೀಂ ಬಳಕೆ ಮಾಡುತ್ತಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.
ಪ್ರತಿ ಅಭ್ಯರ್ಥಿಗೆ ಗರಿಷ್ಠ 60 ಲಕ್ಷ ರೂ. ಫಿಕ್ಸ್ ಮಾಡುತ್ತಿದ್ದ ಆರೋಪಿಗಳು ತಮ್ಮ ಜಾತಿಯ ಅಭ್ಯರ್ಥಿಗಳು ಎಷ್ಟು ಕೊಟ್ಟರು ಸೈ ಎನ್ನುತ್ತಿದ್ದರು. ಶಾಸಕರ ಗನ್‌ಮ್ಯಾನ್ ಹಯ್ಯಾಳಿ ದೇಸಾಯಿ 30 ಲಕ್ಷಕ್ಕೆ ವ್ಯಾಪಾರ ಕುದುರಿಸಿಕೊಂಡಿದ್ದನಂತೆ.
ಸಿಐಡಿ ತಂಡಕ್ಕೆ ಬಗೆದಷ್ಟು ರೋಚಕ ವಿಚಾರಗಳು ಬಯಲಾಗುತ್ತಿವೆ. ಡಿವೈಸ್ ಬಳಕೆ ಮಾಡಿ ಪಾಸಾದ ಮೂವರು ಅಭ್ಯರ್ಥಿಗಳು ಸಿಐಡಿ ಬಲೆಗೆ ಬಿದ್ದಿದ್ದು,ಮತ್ತಷ್ಟು ಅಭ್ಯರ್ಥಿಗಳು ಪರೀಕ್ಷಾ ಅಕ್ರಮದಲ್ಲಿ ಶಾಮಿಲಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …