ಪುಣೆ: ಪಿಎಸ್‍ಐ ಅಕ್ರಮ ಪ್ರಕರಣದಲ್ಲಿ 18 ದಿನಗಳಿಂದ ತಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ ಬಂದನ ಮಾಡಲಾಗಿದೆ. ಪುಣೆಯಲ್ಲಿ ತನ್ನ ಸ್ನೇಹತೆಯಾದ ಅರ್ಚನಾ ಅವರ ಮನೆಯಲ್ಲಿ ಇದ್ದರು ಎಂಬ ಮಾಹಿತಿ ಆಧಾರದ ಮೇಲೆ ಬಂಧನ ಮಾಡಲಾಗಿದೆ. ದಿವ್ಯಾ ಹಾಗರಗಿಯ ಸ್ನೇಹಿತೆಯ ಮೊವೈಲ್ ಟವರ್ ಆಧಾರದ ಮೇಲೆ ಸಿಐಡಿ ತಂಡ ದಿವ್ಯಾ ಹಾಗರಗಿ ಜೊತೆಗೆ ಅವಳ ಸ್ನೇಹಿತರನ್ನ ಸಹ ಬಂಧಿಸಿದ್ದಾರೆ
ಸಿಐಡಿ ಟೀಂಗೆ ನಿರೀಕ್ಷಣಾ ಜಾಮೀನು ನೀಡದಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದರು.
ಪಿಎಸ್‍ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಮುಖ ತಾಣವಾದ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಸಿಐಡಿ ತನಿಖೆಯಿಂದ ತಲೆ ಮರೆಸಿಕೊಂಡಿದರು,
ಅಜ್ಞಾತ ಸ್ಥಳದಿಂದಲೇ ದಿವ್ಯಾ & ಟೀಮ್ ನೀರಿಕ್ಷಣಾ ಜಾಮೀನು ಕೋರಿ ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಆದರೀಗ ನೀರಿಕ್ಷಣಾ ಜಾಮೀನಿಗೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದೆ. ಇದು ಸಂಘಟಿಕ ಅಪರಾಧ, ಜಾಮೀನು ಕೊಟ್ಟರೆ ಸಾಕ್ಷಿ ನಾಶ ಪಡಿಸುವ ಸಾಧ್ಯತೆ ಇದೆ. ಹಾಗಾಗಿ ಈ ಐವರಿಗೆ ನಿರೀಕ್ಷಣಾ ಜಾಮೀನು ನೀಡಬೇಡಿ ಎಂದು ಕಲಬುರಗಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದೆ.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …