ನವದೆಹಲಿ;
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಈ ವರ್ಷದ ಆರಂಭದಲ್ಲಿ ನಡೆದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಹಣಾಹಣಿ ನಡೆಸಿದ್ದವು. ಗೋವಾ ಚುನಾವಣೆಯಲ್ಲಿ ಟಿಎಂಸಿ ಯಾವುದೇ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆಸಲಾಯಿತು . ಗೋವಾ ಚುನಾವಣೆಯಲ್ಲಿ
ಆಪ್ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಜಸ್ಟೀಸ್ ಕಾನ್ಕ್ಲೇವ್ನಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೆಹಲಿಯಲ್ಲಿದ್ದಾರೆ. ಇತರ ರಾಜ್ಯಗಳ ಮುಖ್ಯಮಂತ್ರಿಗಳು ಹೈಕೋರ್ಟ್ ಸಿಜೆಗಳು ಹಾಗೂ ಸಿಎಂಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …