ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಹತ್ವದ ಮಾತುಕತೆ ನಡೆದಿದೆ. ಈ ಹಿಂದೆ ಸಹಮತ ನೀಡಿದ್ದ ಶಾ ಅಧಿಕೃತ ಸಮ್ಮತಿ ನೀಡಿ ಪಕ್ಷ ಸೇರ್ಪಡೆ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಅಮಿತ್ ಶಾ ವಾಸ್ತವ್ಯ ಹೂಡಿರುವ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಬಸವರಾಜ ಹೊರಟ್ಟಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕರೆದೊಯ್ದರು. ಈ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆ ಕುರಿತು ಮಾತುಕತೆ ನಡೆಸಿದರು. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹೊರಟ್ಟಿ ಸ್ಪರ್ಧಿಸುವ ಕುರಿತು ಸಮಾಲೋಚನೆ ನಡೆಸಿದರು.ಎರಡು ಶಿಕ್ಷಕರ ಕ್ಷೇತ್ರ ಮತ್ತು ಎರಡು ಪದವೀಧರರ ಕ್ಷೇತ್ರಗಳು ತೆರವಾಗಲಿದ್ದು, ಭಾರತೀಯ ಜನತಾ ಪಕ್ಷ ಈಗಾಗಲೇ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದರೂ ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಕ್ಷೇತ್ರಕ್ಕೆ ಮಾತ್ರ ಇನ್ನೂ ಅಭ್ಯರ್ಥಿಯನ್ನು ಪ್ರಕಟಿಸಿರಲಿಲ್ಲ.ê
