ತಾಳಿಕೋಟೆ : ರಾಜ್ಯ ವಿಧಾನ ಸಭಾ ಚುನಾವಣೆ ಕೇವಲ ಒಂದು ವರ್ಷ ಇರುವಾಗಲೇ ಇಷ್ಟು ದಿನ ಮೌನವಾಗಿದ್ದ ಗಣಿ ಧನಿ ಜನಾರ್ದನ ರೆಡ್ಡಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಹಲವು ವರ್ಷಗಳಿಂದ ಅಂತರ ಕಾಯ್ದುಕೊಂಡಿದ್ದ ಜನಾರ್ದನ ರೆಡ್ಡಿ ಅವರು ಮತ್ತೆ ಮುನ್ನೆಲೆಗೆ ಬಂದಿದ್ದು ಬಿಜೆಪಿ ಪಕ್ಷಕ್ಕೆ ನೇರವಾಗಿ ಟಾಂಗ್ ನೀಡಿದ್ದಾರೆ.
ರೆಡ್ಡಿ ಸಮುದಾಯ ರಾಜ್ಯ ರಾಜಕಾರಣದಲ್ಲಿ ಗುರುತಿಸಿಕೊಂಡಿದೆ. ಅದು ಯಾವ ರೀತಿ ಎಂದರೆ ರಾಜ್ಯದಲ್ಲಿ ಬಿಜೆಪಿ ಸರಕಾರ ಮೊದಲ ಬಾರಿಗೆ ಅಧಿಕಾರ ಹಿಡಿದಿದ್ದೇ ರೆಡ್ಡಿಗಳಿಂದ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಮಂಗಳವಾರ ಪಟ್ಟಣದಲ್ಲಿ ರೆಡ್ಡಿ ಸಮಾಜ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ತರುವುದಷ್ಟೇ ಅಲ್ಲ, ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದು ರೆಡ್ಡಿಗಳಿಂದ. ರೆಡ್ಡಿ ಜನಾಂಗದವರು ಯಾವುದೇ ಕೆಲಸ ಹಿಡಿದರೂ ದಡ ಮುಟ್ಟುವವರೆಗೂ ಬಿಡುವವರಲ್ಲ ಎಂದರು. ಈ ಮೂಲಕ ತಾವು ಮತ್ತೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಹೊಡೆಯುವ ಮುನ್ಸೂಚನೆ ನೀಡಿದ್ದಾರೆ.