Breaking News

ಜೈಲಿಗೆ ಹೋಗಿ ಬಂದವರು ಮಾತನಾಡಲು ಯಾವುದೇ ನೈತಿಕತೆ ಇಲ್ಲ

Spread the love

ಬೆಂಗಳೂರು : ಭ್ರಷ್ಟಾಚಾರಕ್ಕೆ ಹೆಸರು ವಾಸಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಭ್ರಷ್ಟಾಚಾರದ ಬಗ್ಗೆ ಬಹಳ ದೊಡ್ಡ ಹೇಳಿಕೆ ನೀಡಿದ್ದಾರೆ. ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದ ವ್ಯಕ್ತಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ನಾರಾಯಣ ತಿರುಗೇಟು ನೀಡಿದ್ದಾರೆ.

ಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಶ್ವತ್ಥನಾರಾಯಣ ಅತ್ಯಂತ ಭ್ರಷ್ಟಸಚಿವ ಎಂಬ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿ ವಿಧಾನಸೌಧದಲ್ಲಿ ಮಾತನಾಡಿದ ಅವರು ಯಾವುದೇ ದಾಖಲೆ ಇಲ್ಲದೆ ಮಾತನಾಡಿದ್ದಾರೆ. ಜೈಲಿಗೆ ಹೋಗಿ ಬಂದ ವ್ಯಕ್ತಿ ನನ್ನ ಬಗ್ಗೆ ಮಾತನಾಡಿದ್ದಾರೆ. ನೈತಿಕತೆ ಇಲ್ಲದ ವ್ಯಕ್ತಿ ಮಾಡಿರುವ ಸುಳ್ಳು ಆರೋಪಗಳನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.


Spread the love

About Karnataka Junction

    Check Also

    ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ

    Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …

    Leave a Reply

    error: Content is protected !!