ನವದೆಹಲಿ : ಕೋವಿಡ್ ಸೋಂಕು ಇಳಿಕೆಯಾಗುತ್ತಿದ್ದಂತೆ ಜಗತ್ತು ಮತ್ತೆ ಸಾಮಾನ್ಯ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಐಟಿ ಕಂಪನಿಗಳಾದ ಆ್ಯಪಲ್, ಗೂಗಲ್ ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದ ತಮ್ಮ ಉದ್ಯೋಗಿಗಳಿಗೆ ಮತ್ತೆ ಆಫೀಸಿಗೆ ಮರಳಲು ಸೂಚನೆ ನೀಡಿವೆ. ಆದರೆ ಕಳೆದ 2 ವರ್ಷಗಳಿಂದಲೂ ವರ್ಕ್ ಫ್ರಂ ಹೋಮ್‌ನಲ್ಲಿದ್ದ ಉದ್ಯೋಗಿಗಳು ಈ ಆದೇಶದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆ್ಯಪಲ್ ಸಿಇಒ ಟಿಮ್ ಕುಕ್ ಅವರು ಮೇ 23ರಿಂದ ತಮ್ಮ ಉದ್ಯೋಗಿಗಳಿಗೆ ಕನಿಷ್ಠ ವಾರಕ್ಕೆ ಮೂರು ದಿನಗಳ ಕಾಲ ಕಚೇರಿಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದಕ್ಕೆ ಶೇ.76 ಉದ್ಯೋಗಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಶೇ.56 ರಷ್ಟು ಸಿಬ್ಬಂದಿ ಉದ್ಯೋಗಕ್ಕೆ ರಾಜೀನಾಮೆ ನೀಡಲು ಬಯಸಿದ್ದಾರೆ ಎಂಬುದು ಇತ್ತೀಚೆಗೆ ನಡೆದ ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ.