Breaking News

ಭಾರೀ ಬಿರುಗಾಳಿ ಸಮೇತ ಮಳೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್ ಮನೆ ಎದುರು ಮರವೊಂದು ನೆಲಕ್ಕೆ

Spread the love

ಹುಬ್ಬಳ್ಳಿ: ‌ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ
ಎರಡನೇ ದಿನವೂ ಭಾರೀ ಬಿರುಗಾಳಿ ಸಹಿತ ಮಳೆ ಮುಂದುವರೆದಿದ್ದು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ನಗರದ ಹಲವೆಡೆ ಮರಗಳು ಧರೆಗೆ ಉರುಳಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಯ ಆವರಣದಲ್ಲಿಯೇ ಸಂಭವಿಸಬಹುದಾದ ಬಹುದೊಡ್ಡ ಅಪಘಾತ ತಪ್ಪಿದಂತಾಗಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್ ಮನೆ ಎದುರು ಮರವೊಂದು ಧರೆಗೆ ಉರುಳಿದ್ದು, ಜಗದೀಶ್​ ಶೆಟ್ಟರ್ ಪೊಲೀಸ್​ ಬೆಂಗಾವಲು ವಾಹನದ ಮೇಲೆಯೇ ಮರ ಉರುಳಿ ಬಿದ್ದಿರುವ ಪರಿಣಾಮ ವಾಹನ ಜಖಂಗೊಂಡಿದೆ. ಅದೃಷ್ಟವಶಾತ್ ಪೊಲೀಸ್ ಜೀಪ್​​ನಲ್ಲಿದ್ದ ಚಾಲಕ ಪಾರಾಗಿದ್ದು, ನಗರದ ವಿವಿಧ ಬಡಾವಣೆಗಳಲ್ಲಿ ಬೃಹತ್ ಗಾತ್ರದ ಮರಗಳು ನೆಲಕ್ಕೆ ಬಿದ್ದಿವೆ.ಮೇಲ್ಛಾವಣಿ ಕುಸಿತ ಗೋಪನಕೊಪ್ಪದ ಸಿದ್ದರಾಮನಗರದ ಮೂರನೇ ಕ್ರಾಸ್​ನಲ್ಲಿ ನಡೆದಿದೆ. ನಿನ್ನೆಯಿಂದಲೇ ಹುಬ್ಬಳ್ಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಮಧ್ಯಾಹ್ನದವರೆಗೆ ಸುಡುವ ಬಿಸಿಲು ಸಂಜೆಯಾಗುತ್ತಿದ್ದಂತೆಯೇ ವರುಣನ ಆಗಮನವಾಗಿದೆ.
ನಿನ್ನೆಯೂ ಸಾಕಷ್ಟು ಹಾನಿ ಮಾಡಿದ್ದ ಮಳೆ ಇಂದು ಕೂಡ ತನ್ನ ರೌದ್ರನರ್ತನ ಮುಂದುವರೆಸಿದೆ. ಏಕಾಏಕಿ ಸುರಿದ ಮಳೆಯಿಂದ ಮರ ಬಿದ್ದಿದ್ದು, ಮನೆಯ ಛಾವಣಿ ಕುಸಿದಿದೆ.
ಗೋಕುಲ ರಸ್ತೆಯ ಕುಮಾರಪಾರ್ಕ್‌ನ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಉರುಳಿಬಿದ್ದಿದೆ. ಹಳೇ ಹುಬ್ಬಳ್ಳಿಯ ದುರ್ಗದ ಬೈಲ್‌ನ ಮಹಾತ್ಮ ಗಾಂಧಿ ಮಾರುಕಟ್ಟೆಯ ಹಳೆಯ ಕಟ್ಟಡದ ಚಾವಣಿ ಮಳೆಯ ಹೊಡೆತಕ್ಕೆ ಕುಸಿದಿದೆ. ಸ್ಥಳದಲ್ಲಿ ಯಾರೂ ಇಲ್ಲದಿದ್ದರಿಂದ ಅಪಾಯ ಸಂಭವಿಸಿಲ್ಲ. ಕೆಲವೆಡೆ ವಿದ್ಯುತ್ ಕಂಬಗಳು ಬಿದ್ದಿರುವ ವರದಿಯಾಗಿದೆ.
ಇಂದು ಕೂಡ ,34 ಕ್ಕೂ ಅಧಿಕ ಮರಗಳು ನೆಲಕ್ಕೆ ಉರುಳಿದ್ದು ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿ ನಾಶವಾಗಿದೆ.


Spread the love

About Karnataka Junction

    Check Also

    ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.

    Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …

    Leave a Reply

    error: Content is protected !!