ಜೂನ್‌ 1 ರಿಂದ ಶಾಲೆ ಆರಂಭಿಸಿ: ಬಸವರಾಜ ಹೊರಟ್ಟಿ

Spread the love

ಹುಬ್ಬಳ್ಳಿ: ‘ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಉರಿಬಿಸಿಲು ಹೆಚ್ಚಿದೆ. ಆದ್ದರಿಂದ ಶಾಲೆಗಳನ್ನು ಮೇ 15ರ ಬದಲಾಗಿ, ಜೂನ್‌ 1 ರಿಂದ ಆರಂಭಿಸಬೇಕು’ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
‘ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಮೇ 16 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿರುವುದು ಎಳೆಯ ಮಕ್ಕಳ ಪಾಲಕರಿಗೆ ನುಂಗಲಾರದ ತುತ್ತಾಗಿದೆ. ಶಾಲೆ ಆರಂಭಿಸಿದರೂ, ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಸಿದ್ಧರಿಲ್ಲ ಎಂಬುದನ್ನು ಮನಗಂಡಿದ್ದೇನೆ. ಶಾಲೆ ಆರಂಭಿಸಿದರೆ, ಮಕ್ಕಳು ಸನ್‌ ಸ್ಟ್ರೋಕ್‌ಗೆ ಒಳಗಾಗಬಹುದು’ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.
‘ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಜೂ.1 ರಿಂದ ಆರಂಭಿಸಬೇಕು. ಕಡಿಮೆ ಬೀಳುವ ಶೈಕ್ಷಣಿಕ ದಿನಗಳಲ್ಲಿ ಪ್ರತಿ ಶನಿವಾರ ಹೆಚ್ಚುವರಿ ತರಗತಿ ನಡೆಸುವ ಮೂಲಕ ಸರಿಪಡಿಸಿಕೊಳ್ಳಬಹುದಾಗಿದೆ’ ಎಂದು ಅವರು ತಿಳಿಸಿದ್ದಾರೆ.


Spread the love

About gcsteam

    Check Also

    ಪಿಯುಸಿಯಲ್ಲಿ ರಾಜ್ಯಕ್ಕೆ 3ನೇ ರಾಂಕ್: ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಮಹತ್ವದ ಸಾಧನೆ

    Spread the loveಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ. ಈ ಸಂಸ್ಥೆ ಒಂದಿಲ್ಲೊಂದು ರೀತಿಯಲ್ಲಿ ಸಾಧನೆ ಮಾಡುತ್ತ ಬಂದಿದೆ. …

    Leave a Reply