Breaking News

ಕೆಲಸ ಇಲ್ಲ, ತಿನ್ನಲು ಅನ್ನವೂ ಇಲ್ಲ ದಯವಿಟ್ಟು ಸಾವು ನೀಡಿ

Spread the love

ಬೆಂಗಳೂರು : ಬಿಎಂಟಿಸಿ ಬಸ್ ಚಾಲಕನೊಬ್ಬ ರಾಷ್ಟ್ರಪತಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ದಯಾಮರಣಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾನೆ. “ನಾನು, ನನ್ನ ಹೆಂಡತಿ ಹಾಗೂ ಮಕ್ಕಳು ಸಾಯಬೇಕಾಗಿದೆ. ದಯವಿಟ್ಟು ಅದಕ್ಕೆ ಅವಕಾಶ ನೀಡಿ” ಅಂತ ಮನವಿ ಮಾಡಿದ್ದಾನೆ. ಬೆಂಗಳೂರಿನ ಬಿಎಂಟಿಸಿ ಬಸ್ ಡ್ರೈವರ್ ಶಂಬುಲಿಂಗಯ್ಯ ಚಿಕ್ಕಮಠ ಎಂಬುವವರೇ ದಯಾಮರಣಕ್ಕೆ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವವರು. ನಾನು, ನನ್ನ ಹೆಂಡತಿ ಹಾಗೂ ಮಕ್ಕಳು ಸಾಯಬೇಕಾಗಿದೆ. ದಯವಿಟ್ಟು ಅದಕ್ಕೆ ಅವಕಾಶ ನೀಡಿ ಅಂತ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.
ನಾನು ಈ ಹಿಂದೆ ಬಿಎಂಟಿಸಿ ಮುಷ್ಕರದಲ್ಲಿ ಭಾಗಿಯಾಗಿರಲಿಲ್ಲ. ಆದರೂ ಬಿಎಂಟಿಸಿ ಅಧಿಕಾರಿಗಳು ನನ್ನನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಒಂದು ವರ್ಷದಿಂದ ಮಾಡಲು ಕೆಲಸವಿಲ್ಲ, ಬದುಕಲು ದಿಕ್ಕೇ ಇಲ್ಲ. ತಿನ್ನಲು ಅನ್ನವಿಲ್ಲ. ಮನೆ ಬಾಡಿಗೆ ಕಟ್ಟಲು ಆಗ್ತಿಲ್ಲ. ಹೀಗಾಗಿ ನಮ್ಮ ಇಡೀ ಕುಟುಂಬ ಬೀದಿಗೆ ಬಿದ್ದಿದೆ. ಇದರಿಂದ ನಾನು, ನನ್ನ ಹೆಂಡತಿ ಹಾಗೂ ಮಕ್ಕಳೊಂದಿಗೆ ಸಾಯಲು ನಿರ್ಧರಿಸಿದ್ದೇನೆ” ಅಂತ ತಮ್ಮ ಸಂಕಷ್ಟ ತೋಡಿಕೊಂಡಿದ್ದಾರೆ.


Spread the love

About Karnataka Junction

[ajax_load_more]

Check Also

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು

Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …

Leave a Reply

error: Content is protected !!