Breaking News

12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Spread the love

ಎಲ್ಲಲ್ಲಿ ಯಾವಾವ ಅಧಿಕಾರಿಗಳ ಸ್ಥಾನ ನಿಯುಕ್ತಿ ಇಲ್ಲಿದೆ ಮಾಹಿತಿ
ಬೆಂಗಳೂರು-: ಬೆಂಗಳೂರು ಗ್ರಾಮಾಂತರ ಎಸ್‌ಪಿಯಾಗಿದ್ದ ರವಿ ಡಿ ಚನ್ನಣ್ಣನವರ್ ಸೇರಿದಂತೆ ಒಟ್ಟು 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ರವಿ ಚನ್ನಣ್ಣನವರ್ ಅವರನ್ನು ಸಿಐಡಿ ಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಮೈಸೂರು ಎಸ್‌ಪಿಯಾಗಿದ್ದ ಸಿ.ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ರವಿ ಡಿ ಚನ್ನಣ್ಣನವರ್ ಅವರನ್ನು ಸಿಐಡಿ ಎಸ್‌ಪಿ, ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಕರಾವಳಿ ಭದ್ರತಾ ಪಡೆ ಎಸ್‌ಪಿ ಆರ್ ಚೇತನ್ ಅವರನ್ನು ಮೈಸೂರು ಎಸ್‌ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಕೋಲಾರ ಜಿಲ್ಲೆಯ ಎಸ್‌ಪಿ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ಎಸ್‌ಪಿಯಾಗಿ (ವೈರ್‌ಲೆಸ್) ವರ್ಗಾವಣೆ ಮಾಡಲಾಗಿದೆ.
.ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ ರಾಹುಲ್ ಕುಮಾರ್ ಶಹಾಪೂರ್ವದ್ ಅವರನ್ನು ತುಮಕೂರು ಎಸ್‌ಪಿಯಾಗಿ ವರ್ಗಾಯಿಸಲಾಗಿದೆ.
ದಾವಣಗೆರೆ ಜಿಲ್ಲೆಯ ಎಸ್‌ಪಿ ಹನುಮಂತರಾಯ ಅವರನ್ನು ಹಾವೇರಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
ಮೈಸೂರಿನ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ. ಎ.ಎನ್. ಪ್ರಕಾಶ್ ಗೌಡ ಅವರನ್ನು ಬೆಂಗಳೂರು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಹಾವೇರಿ ಜಿಲ್ಲೆಯ ಎಸ್‌ಪಿ ಕೆ.ಜಿ. ದೇವರಾಜು ಅವರನ್ನು ಬೆಂಗಳೂರಿನ ಸಿಐಡಿ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಮೈಸೂರಿನ ಎಸ್‌ಪಿ ಸಿ.ಬಿ. ರಿಷ್ಯಂತ್ ಅವರನ್ನು ದಾವಣಗೆರೆ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
ಕಲಬುರಗಿ ಜಿಲ್ಲೆಯ ಡಿಸಿಪಿ ಡೆಕ್ಕ ಕಿಶೋರ್ ಬಾಬು ಅವರನ್ನು ಕೋಲಾರ ಜಿಲ್ಲೆಯ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ.ತುಮಕೂರಿನ ಎಸ್‌ಪಿ ಡಾ. ಕೋನಾ ವಂಶಿ ಕೃಷ್ಣ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಆಂತರಿಕ ಭದ್ರತಾ ಇಲಾಖೆಯ ಎಸ್ಪಿ ಪ್ರದೀಪ್ ಗುಂಟಿ ಅವರನ್ನು ಮೈಸೂರು ನಗರದ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ (ವೈರ್‌ಲೆಸ್‌) ಎಸ್‌ಪಿ ಅಡ್ಡೂರು ಶ್ರೀನಿವಾಸುಲು ಅವರನ್ನು ಕಲಬುರಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.


Spread the love

About Karnataka Junction

[ajax_load_more]

Check Also

ಎಂ ಆರ್ ಸಿ ವಾರಿಯರ್ಸ್ ತಂಡ ಚಾಂಪಿಯನ್

Spread the loveಹುಬ್ಬಳ್ಳಿ ಫೋಟೋ ಹಾಗೂ ವಿಡಿಯೋಗ್ರಾಫರ್ ಸಂಘದ ವತಿಯಿಂದ ಹಾಗೂ ವಿ ಎ ಕೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹುಬ್ಬಳ್ಳಿಯ …

Leave a Reply

error: Content is protected !!