ಬೆಂಗಳೂರು: ಮೇ 21, 22ರಂದು ಪ್ರಾಥಮಿಕ ಶಾಲಾ ಶಿಕ್ಷಕರ 15,000 ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಸಲಾಗುವುದು ಎಂದು ನಗರದಲ್ಲಿ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಸುದ್ದಿಗೊಷ್ಠಿಯಲ್ಲಿ ಹೇಳಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ್ದು, ರಾಜ್ಯದ 435 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ನಡೆಯಲಿದೆ. ಪರೀಕ್ಷೆಗೆ ಸೂಕ್ತ ಕ್ರಮಗಳ ಬಗ್ಗೆ ಗೃಹ ಇಲಾಖೆ ಜೊತೆ ಚರ್ಚಿಸಿದ್ದೇವೆ. ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ವಸ್ತು ಒಯ್ಯುವಂತಿಲ್ಲ. ಮೊಬೈಲ್, ವಾಚ್, ಎಲೆಕ್ಟ್ರಾನಿಕ್ ಡಿವೈಸ್ಗೆ ಅವಕಾಶ ಇರಲ್ಲ. ಪ್ರಶ್ನೆಪತ್ರಿಕೆ ಗೌಪ್ಯತೆ, ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಪ್ರತಿ ಕೇಂದ್ರದಲ್ಲಿ 20 ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆಗೆ ಅವಕಾಶವಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಕ್ಯಾಮರಾ ಅಳವಡಿಸಿಕೊಳ್ಳಲಾಗಿದೆ. ಯಾವುದೇ ಡ್ರಸ್ ಕೋಡ್ ನಿಗದಿ ಮಾಡಿಲ್ಲ ಎಂದು ಹೇಳಿದರು.
ಪರೀಕ್ಷಾ ಕೇಂದ್ರದ ಪ್ರವೇಶಕ್ಕೆ ಕೆಲವಡೆ ಮೆಟಲ್ ಡಿಟೆಕ್ಟರ್ ಅಳವಡಿಸಿಕೊಳ್ಳಲಾಗುತ್ತಿದೆ. ಪರೀಕ್ಷಾ ಕೇಂದ್ರದ ಶಾಲೆಗಳ ಶಿಕ್ಷಕರನ್ನೆ ಅದೇ ಕೇಂದ್ರಕ್ಕೆ ಪರೀಕ್ಷಾ ಅಧಿಕಾರಿಗಳಾಗಿ ಬಳಸಿಕೊಳ್ಳೊದಿಲ್ಲ. ಪರೀಕ್ಷಾ ಕೇಂದ್ರದ ನೂರು ಮೀಟರ್ ಸುತ್ತಾ 144 ಸೆಕ್ಷನ್ ಇರಲಿದ್ದು, ಮೇ 14 ರಂದು ಪರೀಕ್ಷೆಗೆ ಎಸ್ಒಪಿ ಬಿಡುಗಡೆ ಮಾಡಲಾಗವುದು ಎಂದು ಹೇಳದ್ದಾರೆ. 435 ಪರೀಕ್ಷಾ ಕೇಂದ್ರಗಳಲ್ಲಿ 1,00683 ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಲ್ಲಿದ್ದಾರೆ. ಪರೀಕ್ಷೆ ಸೂಕ್ತ ಕ್ರಮಗಳ ಬಗ್ಗೆ ಗೃಹ ಇಲಾಖೆಯ ಜೊತೆ ಕೂಡ ಚರ್ಚೆ ಮಾಡಲಾಗಿದೆ ಸಚಿವ ಬಿ.ಸಿ.ನಾಗೇಶ್ ಹೇಳಿದರು.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …