ಬೆಂಗಳೂರು : ಸ್ಯಾಂಡಲ್ ವುಡ್ ತಾರೆ ಹಾಗೂ ಕೈ ಸಾಮಾಜಿಕ ತಾಣಗಳ ಕ್ವೀನ್ ಮನಮೋಹಕ ತಾರೆ ರಮ್ಯಾ ಈಗ ಮತ್ತೆ ಮುನ್ನೆಲೆಗೆ ಬಂದಿದ್ದಾಳೆ. ತಮ್ಮ ಪಕ್ಷದ ಪ್ರಭಾವಿ ನಾಯಕನಿಗೆ ತಿರುಗೇಟು ನೀಡುವ ಮೂಲಕ ರಮ್ಯಾ ಮತ್ತೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ ನೀಡ್ತಿದ್ದಾರಾ ಅನ್ನೋ ಮುನ್ಸೂಚನೆ ಎದುರಾಗಿದೆ. ಅದರಲ್ಲೂ ತಮ್ಮ ವಿರೋಧಿ ಪಕ್ಷದ ನಾಯಕನ ಪರ ಮೃದು ಧೋರಣೆ ಹೊಂದುವ ಮೂಲಕ ಆಶ್ಚರ್ಯ ಮೂಡಿಸಿದ್ದಾರೆ.
ಹೌದು, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್ ನಾರಾಯಣ್ ಭೇಟಿಯ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ನೀಡಿದ ಹೇಳಿಕೆಗೆ ಮಾಜಿ ಸಂಸದೆ ರಮ್ಯಾ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ಅಶ್ವತ್ಥ್ ನಾರಾಯಣ್ ಅವರು ಎಂ.ಬಿ. ಪಾಟೀಲ್ರನ್ನು ಭೇಟಿ ಮಾಡಿದ್ದರು. ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಡಿಕೆ ಶಿವಕುಮಾರ್, ಅಶ್ವತ್ಥ್ ನಾರಾಯಣ್ ತಮ್ಮ ರಕ್ಷಣೆಗೆ ಎಂ.ಬಿ. ಪಾಟೀಲರನ್ನು ಭೇಟಿ ಮಾಡಿದ್ದಾರೆ ಎಂದು ಗೊಂದಲದ ಹೇಳಿಕೆ ನೀಡಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ರಮ್ಯಾ, ವಿವಿಧ ಪಕ್ಷಗಳ ಜನರು ಪರಸ್ಪರ ಭೇಟಿಯಾಗುವುದು, ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಸಹಜ. ಕೆಲ ಬೇರೆ ಬೇರೆ ಪಕ್ಷದ ನಾಯಕರ ಕುಟುಂಬ ಸದಸ್ಯರು ಮದುವೆ ಆಗುವ ಮೂಲಕ ಸಂಬಂಧಿಕರಾಗಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಅವರು ಎಂ.ಬಿ. ಪಾಟೀಲ್ ಬಗ್ಗೆ ನೀಡಿರುವ ಹೇಳಿಕೆ ನನಗೆ ಅಚ್ಚರಿ ಮೂಡಿಸಿದೆ ಎಂದಿದ್ದಾರೆ. ಈ ಮೂಲಕ ಡಿಕೆಶಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ, ಜೊತೆಗೆ ಎಂ.ಬಿ ಪಾಟೀಲ್ ಪರ ಬ್ಯಾಟ್ ಬೀಸಿದ್ದಾರೆ. ರಾಜಕೀಯ ಮತ್ತು ಚಿತ್ರರಂಗ ಎರಡರಿಂದಲೂ ಅಂತರ ಕಾಯ್ದುಕೊಂಡಿರುವ ರಮ್ಯಾ, ಇತ್ತೀಚಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಕ್ರಿಯಾಗ್ತಿದ್ದಾರೆ.