ಸಭಾಪತಿ ಸ್ಥಾನಕ್ಕೆ ಮೇ.18 ರಂದು ರಾಜೀನಾಮೆ ನೀಡ್ತೇನೆ: ಹೊರಟ್ಟಿ

Spread the love

ಧಾರವಾಡ ಮೇ.18ಕ್ಕೆ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ವಿಧಾನ ಪರಿಷತ್
ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ.11ಕ್ಕೆ ರಾಜೀನಾಮೆ ಕೊಡಬೇಕಿತ್ತು. ಆದರೆ, ಚುನಾವಣಾ ನೋಟಿಫಿಕೇಶ್ ಬರದಿದ್ದ ಕಾರಣ ನೀಡಿರಲಿಲ್ಲ. ಈಗ ನೋಟಿಫಿಕೇಶನ್ ಕೂಡ ಬಂದಿದೆ. ಮೇ.18ಕ್ಕೆ ರಾಜೀನಾಮೆ ನೀಡುತ್ತೇನೆ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯ
ಮೋಹನ ಲಿಂಬಿಕಾಯಿ ಅವರೂ ತಾವೇ ಪರಿಷತ್ ಅಭ್ಯರ್ಥಿಯಾಗುತ್ತೇನೆ ಎಂದು ಹೇಳುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಹೊರಟ್ಟಿ, ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದರು.ಭಾರತೀಯ ಜನತಾ ಪಕ್ಷದ ಟಿಕೆಟ್ ವಿಚಾರವಾಗಿ ಮೇ.18 ರ ನಂತರವೇ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೊರಟ್ಟಿ ಎಂದ ಅವರು ಇಂದು ಮುಖ್ಯಮಂತ್ರಿ ಎಸ್ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಅನೌಪಚಾರಿಕವಾಗಿ ಸಹ ಚರ್ಚೆ ಮಾಡಲಾಗಿದೆ. ಆದರೆ ಈಗ ಆ ವಿಚಾರ ಬೇಡಾ. ಅನಿವಾರ್ಯ ಕಾರಣದಿಂದಾಗಿ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನು ಮುಂದೂಡಿದ್ದು ಮೇ 18 ರಂದು ರಾಜೀನಾಮೆ ನೀಡುವುದು ಖಚಿತ. ಆದರೆ ಈಗಾಗಲೇ ಮೇ 11 ರಂದು ರಾಜೀನಾಮೆ ನೀಡುತ್ತೇನೆ‌ ಎಂದು ಹೇಳಿದ್ದೆ ಎಂದರು. ವಿಧಾನ ಪರಿಷತ್ ಸಭಾಪತಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನೊಂದು ಕಡೆ ಭಾರತೀಯ ಜನತಾ ಪಕ್ಷದಲ್ಲಿ ಈ ಬೆಳವಣಿಗೆ ಆಂತರಿಕ ಕೆಲವಕ್ಕೆ ಸಹ ಕಾರಣವಾಗುವುದರಲ್ಲಿ ಸಂದೇಹವಿಲ್ಲ.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply