Breaking News

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ

Spread the love

ಬೆಂಗಳೂರು: ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಕುರಿತು ಸಮಾಲೋಚನೆ ನಡೆಸಿದ್ದಾರೆ.
ಇಂದು ಬಿಎಸ್​ವೈ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಪರಿಷತ್​ನ ಏಳು ಸ್ಥಾನ, ಶಿಕ್ಷಕ, ಪದವೀಧರ ಕ್ಷೇತ್ರದ ನಾಲ್ಕು ಸ್ಥಾನ, ರಾಜ್ಯಸಭೆಯ ನಾಲ್ಕು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತು ಮಾತುಕತೆ ನಡೆಸಿದರು. ಕಳೆದ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದ ಸಿಎಂ, ಇಂದು ಬೆಳಗ್ಗೆ ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.ಯಡಿಯೂರಪ್ಪ ಭೇಟಿ ಮಾಡಿದ ಸಿಎಂ
ನಾಳೆ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಿದ್ದಾರೆ. ಅದಕ್ಕೂ ಮೊದಲು ಯಡಿಯೂರಪ್ಪ ಅವರಿಂದ ಸಿಎಂ ಕೆಲವೊಂದು ಸಲಹೆ ಪಡೆದುಕೊಂಡರು.
ದೆಹಲಿ ಭೇಟಿ ವೇಳೆ ಅಮಿತ್ ಶಾ ಜೊತೆ ನಡೆಸಿದ ಮಾತುಕತೆ ಕುರಿತು ಯಡಿಯೂರಪ್ಪಗೆ ಸಿಎಂ ಮಾಹಿತಿ ನೀಡಿದರು. ವಿಸ್ತರಣೆ, ಪುನರ್​ ರಚನೆ ಕುರಿತು ಕೆಲಕಾಲ ಸಮಾಲೋಚನೆ ನಡೆಸಿದರು. ಮುಂದಿನ ಎರಡು, ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ಯಡಿಯೂರಪ್ಪ ಹೇಳಿಕೆ ಹಿನ್ನೆಲೆಯಲ್ಲಿ ಸಿಎಂ ಮತ್ತು ಬಿಎಸ್​ವೈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ ‌.


Spread the love

About Karnataka Junction

[ajax_load_more]

Check Also

ಪವನ ಬಿಜವಾಡ ಬಮ್ಮಾಪುರ ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಆಗಿ ನೇಮಕ

Spread the loveಹುಬ್ಬಳ್ಳಿ; ನಗರದ ಬಮ್ಮಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಪವನ ಪರಶುರಾಮ ಬಿಜವಾಡ ಅವರನ್ನ ಪ್ರಧಾನ ಕಾರ್ಯದರ್ಶಿಯನಾಗಿ ನೇಮಕ …

Leave a Reply

error: Content is protected !!