ಮುಂಬೈ : ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಕುಟುಂಬದಲ್ಲಿ ಮತ್ತೊಂದು ಡಿವೋರ್ಸ್ ವಿಚಾರ ಸದ್ದು ಮಾಡುತ್ತಿದೆ. ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಪತ್ನಿ ಮಲೈಕಾ ಅರೋರಾ ಅವರಿಂದ ದೂರ ಆದ ಬಳಿಕ ಇದೀಗ ಸಲ್ಮಾನ್ ಅವರ ಮತ್ತೋರ್ವ ಸಹೋದರ ಸೋಹೈಲ್ ಖಾನ್ ಕೂಡ ಪತ್ನಿಯಿಂದ ದೂರ ಆಗುವ ನಿರ್ಧಾರ ಮಾಡಿದ್ದಾರೆ. ಹೌದು, ಸೋಹೈಲ್ ಖಾನ್ ಮತ್ತು ಸೀಮಾ ದಂಪತಿ ದೂರ ದೂರ ಆಗುತ್ತಿದ್ದು ಇಂದು (ಮೇ 13) ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಮುಂಬೈನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು ಇಬ್ಬರು ಕೌಟುಂಬಿಕ ನ್ಯಾಯಾಲಯದಿಂದ ಹೊರಬರುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮೂಲಗಳ ಪ್ರಕಾರ, ಸೋಹೈಲ್ ಖಾನ್ ಮತ್ತು ಸೀಮಾ ಖಾನ್ ಇಂದು (ಮೇ 13) ಕೌಟುಂಬಿಕ ನ್ಯಾಯಾಲಯದ ಮುಂದೆ ಹಾಜರಾಗಿದ್ದು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ಕೂಡ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ಎಂಬ ಮಾಹಿತಿ ಸಿಕ್ಕಿದೆ. ಈ ಮೂಲಕ ಸೋಹೈಲ್ ಖಾನ್ ಮತ್ತು ಸೀಮಾ ಇಬ್ಬರು 24 ವರ್ಷಗಳ ದಾಂಪತ್ಯ ಜೀವನಕ್ಕೆ ಎಳ್ಳು-ನೀರು ಬಿಡುತ್ತಿದ್ದಾರೆ.