ಬೆಂಗಳೂರು: _ಸರ್ಕಾರದ ಆದೇಶದ ಅನ್ವಯ ಶಿಕ್ಷಣ ಇಲಾಖೆ ತನ್ನ ನಿಲುವಿನಂತೆ ಶಾಲೆಗಳನ್ನು ಮೇ 16ರಿಂದಲೇ ಪ್ರಾರಂಭವಾಗುತ್ತಿದೆ. ಶಿಕ್ಷಣ ವ್ಯವಸ್ಥೆಯನ್ನು ಸಹಬದಿಗೆ ತರಬೇಕೆಂದು ಶಿಕ್ಷಣ ಸಚಿವರು ಪ್ರಯತ್ನಿಸುತ್ತಿದ್ದಾರೆ. ಶಾಲೆಯ ಆರಂಭದ ದಿನ ಹಬ್ಬದಂತೆ ಹಾಜರಿಸಲು ಇಲಾಖೆ ಸಜ್ಜಾಗಿದೆ. ಈ ನಡುವೆ ಮಕ್ಕಳನ್ನು ಶಾಲೆಗೆ ಕರೆತರಲು ಪ್ರಯತ್ನಗಳು ಸಾಗಿವೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯು ಎದುರಾಗುತ್ತಿದೆ.
ಸರ್ಕಾರಿ ಶಾಲೆಗಲ್ಲಿ ಸಕಲ ಸವಲತ್ತುಗಳನ್ನು ನೀಡಲಾಗುತ್ತದೆ. ಉಚಿತ ಪುಸ್ತಕ, ಸಮವಸ್ತ್ರ ಸೇರಿದಂತೆ ಎಲ್ಲ ರೀತಿಯ ಸೌಕರ್ಯವನ್ನು ಮಾಡಿ ಕೊಡುತ್ತದೆ. ಖಾಸಗಿ ಶಾಲೆಗಳಿಗೂ ಪೈಪೋಟಿ ನೀಡುತ್ತಿವೆ ಸರ್ಕಾರಿ ಶಾಲೆಗಳು. ಇನ್ನು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗುವುದು ಖಚಿತವಾಗಿದೆ. ಇದಕ್ಕಾಗಿಯೇ ಸರ್ಕಾರ ಅಥಿತಿ ಶಿಕ್ಷಕರನ್ನು ನೇಮಿಸುತ್ತಿದೆ. ಸುಮಾರು ರಾಜ್ಯಾದ್ಯಂತ 25 ರಿಂದ 27 ಸಾವಿರ ಅಥಿತಿ ಶಿಕ್ಷಕರನನ್ನು ನೇಮಿಸಲು ಶಿಕ್ಷಣ ಇಲಾಖೆ ಸಜ್ಜಾಗಿದ್ದು ಕೆಲವು ಶಿಕ್ಷಕರನ್ನು ಈಗಾಗಲೇ ನೇಮಿಸುವ ಮೂಲಕ ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು ಎಂದು ಎಚ್ಚರಿಕೆ ವಹಿಸುತ್ತಿದೆ.
Check Also
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ
Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …