ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ವ ರಾಷ್ಟ್ರೀಯ ಅಧ್ಯಕ್ಷರಾಗಲಿ

Spread the love

ರಾಜಸ್ಥಾನ ; ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಮೂರು ದಿನಗಳ ಚಿಂತನಾ ಶಿಬಿರದಲ್ಲಿ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಮಧ್ಯೆಯೇ ಇದೀಗ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಧ್ಯಕ್ಷೆಯಾಗಬೇಕು ಎಂಬ ಕೂಗು ಕೇಳಿ ಬಂದಿದೆ.
ಈ ಬಗ್ಗೆ ಮಾತನಾಡಿರುವ ಪಕ್ಷದ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅತ್ಯಂತ ಜನಪ್ರಿಯ ನಾಯಕಿಯಾಗಿದ್ದಾರೆ. ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ಪಕ್ಷದ ಅಧ್ಯಕ್ಷ ಸ್ಥಾನವನ್ನು ತುಂಬಲು 2 ವರ್ಷಗಳಿಂದ ರಾಹುಲ್ ಗಾಂಧಿ ಅವರ ಮನವೊಲಿಸುವ ಪ್ರಯತ್ನ ನಡೆದಿದೆ. ಅವರು ಸಿದ್ಧರಿಲ್ಲದಿದ್ದರೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಅಭಿಪ್ರಾಯ ಹಂಚಿಕೊಂಡರು. ನಂತರ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಹೊಸ ಮುಖಗಳ ಜೊತೆಗೆ ಅತ್ಯಂತ ಕ್ರಿಯಾಶೀಲ ಕಾರ್ಯಕರ್ತರು ಮುಂಚೂಣಿಗೆ ಬಂದು ಪಕ್ಷದ ಸಂಘಟನೆಯನ್ನು ಮಾಡಬೇಕಾಗಿದೆ ಎಂದರು‌.


Spread the love

Leave a Reply

error: Content is protected !!