ಬೆಂಗಳೂರು : ಧಾರ್ಮಿಕ ಕೇಂದ್ರಗಳಲ್ಲಿ ಲೌಡ್‌ಸ್ಪೀಕರ್ ಬಳಕೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದವು ನಂತರದ ದಿನಗಳಲ್ಲಿ ಧರ್ಮ ಸಂಘರ್ಷಕ್ಕೆ ಕಾರಣವಾಯಿತು. ಸಂಘರ್ಷ ಬಿಟ್ಟು ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಮುಸ್ಲಿಂ ಧರ್ಮ ಗುರುಗಳು ಉತ್ತಮ ನಿರ್ಧಾರವೊಂದಕ್ಕೆ ಬಂದಿದ್ದಾರೆ.
ಹೌದು, ಇನ್ಮುಂದೆ ಬೆಳಗಿನ ಜಾವ ಮೈಕ್ ಮೂಲಕ ಆಜಾನ್ ಕೂಗದಿರಲು ಮುಸ್ಲಿಂ ಧರ್ಮ ಗುರುಗಳು ನಿರ್ಧಾರ ಕೈಗೊಂಡಿದ್ದಾರೆ. ಶರಿಯತ್ ಎ ಹಿಂದ್ ಸಂಘಟನೆಯ ಅಡಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಶಾಸಕ ಜಮೀರ್ ಅಹ್ಮದ್, ಹ್ಯಾರಿಸ್ ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸವದಿ ಉಪಸ್ಥಿತರಿದ್ದರು.