ವಿಧಾನಸಭಾ ಚುನಾವಣೆ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ಕಾರ್ಯತಂತ್ರ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಹಲವು ಮಹತ್ವದ ಬದಲಾವಣೆ ಮಾಡಲು ಯೋಜನೆ ರೂಪಿಸಿದೆ.

ಹೌದು, 2024ರ ಲೋಕಸಭಾ ಚುನಾವಣೆಗೆ ಹೊಸಬರಿಗೆ ಆದ್ಯತೆ ನೀಡಲು ಪ್ಲಾನ್ ಮಾಡಿರುವ ಬಿಜೆಪಿ ಹಿರಿಯ ಸಂಸದರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ರಾಜ್ಯದ 8 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ಚಿಂತನೆ ನಡೆಸಿರುವ ಬಿಜೆಪಿ ವರಿಷ್ಠರು, ಹಾಲಿ ಸಂಸದರಿಗೆ ಟಿಕೆಟ್ ಕೊಡದಿರಲು ನಿರ್ಧರಿಸಿದೆ. ಬೆಳಗಾವಿ ಕ್ಷೇತ್ರದ ಹಾಲಿ ಸಂಸದೆ ಮಂಗಳಾ ಅಂಗಡಿ, ವಿಜಯಪುರ ಕ್ಷೇತ್ರದ ರಮೇಶ್ ಜಿಗಜಿಣಗಿ, ಬಾಗಲಕೋಟೆಯ ಸಂಸದ ಪಿ.ಸಿ.ಗದ್ದಿಗೌಡರ್, ಹಾವೇರಿ ಸಂಸದ ಶಿವಕುಮಾರ್ ಉದಾಸಿ, ತುಮಕೂರು ಸಂಸದ ಜಿ.ಎಸ್.ಬಸವರಾಜು, ಚಿಕ್ಕಬಳ್ಳಾಪುರ ಕ್ಷೇತ್ರದ ಬಿ.ಎನ್.ಬಚ್ಚೇಗೌಡ, ಬೆಂಗಳೂರು ಉತ್ತರ ಕ್ಷೇತ್ರದ ಡಿ.ವಿ.ಸದಾನಂದಗೌಡ ಹಾಗೂ ಚಾಮರಾಜನಗರ ಕ್ಷೇತ್ರದ ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಿದೆ.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply