Breaking News

10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ

Spread the love

ಬೆಂಗಳೂರು: 10ನೇ ತರಗತಿ ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ಊಹಾಪೋಹಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ತೆರೆ ಎಳೆದಿದೆ. ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಗತ್ ಸಿಂಗ್ ಪಾಠವನ್ನು ಕೈ ಬಿಟ್ಟು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೆ.ಬಿ.ಹೆಡಗೆವಾರ ಭಾಷಣವನ್ನು ಪಠ್ಯದಲ್ಲಿ ಸೇರಸಲಾಗಿದೆ. ಈ ಮೂಲಕ ಮಹಾನ್ ದೇಶಪ್ರೇಮಿ ಭಗತ್ ಸಿಂಗ್​ ಅವರಿಗೆ ರಾಜ್ಯ ಸರ್ಕಾರ ಅವಮಾನ ಮಾಡಿದೆ ಎಂದು ಆರೋಪಿಸಿ ಹಲವು ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ವಂದತಿಗೆ ತೆರೆಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ವಂದತಿಗೆ ತೆರೆಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯ ಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಿ, ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಲಾಗಿತ್ತು. ಈ ಸಮಿತಿಯು 6ರಿಂದ 10ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳು ಹಾಗೂ 1ರಿಂದ 10ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದೆ.
ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ವಂದತಿಗೆ ತೆರೆಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ವಂದತಿಗೆ ತೆರೆಪ್ರಸ್ತುತ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಲ್ಲಿದ್ದ ಭಗತ್‌’ ಸಿಂಗ್ ಗದ್ಯವನ್ನು ಕೈಬಿಟ್ಟು ಹೆಡಗೆವಾರ್ ಕುರಿತ ಗದ್ಯ ಸೇರಿಸಲಾಗಿದೆ ಎಂದು ಸುದ್ದಿ ಹರಡಿದಾಡುತ್ತಿದೆ. ಆದರೆ, ವಾಸ್ತವವಾಗಿ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ. ಸದ್ಯ ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯ ಪುಸ್ತಕವು ಪ್ರಸ್ತುತ ಮುದ್ರಣ ಹಂತದಲ್ಲಿದೆ ಎಂದು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಸ್ಪಷ್ಟಣೆ ನೀಡಿದೆ ‌


Spread the love

About Karnataka Junction

    Check Also

    ಪಕ್ಷೇತರ ಅಭ್ಯರ್ಥಿ ಜಿ ಜಿ ದ್ಯಾವನಗೌಡ್ರ ಕಣದಲ್ಲಿ ಮುಂದುವರೆಯಲು ನಿರ್ಧಾರ ?

    Spread the loveಹುಬ್ಬಳ್ಳಿ: .ಶಿಗ್ಗಾವ ಸವಣೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ ನಡೆದಿದ್ದು ಯಾವುದೇ …

    Leave a Reply

    error: Content is protected !!