ಕಾನೂನು ಬಾಹಿರವಾಗಿ ವಾಸಿಸುತಿದ್ದ ಪಾಕಿಸ್ತಾನದ ಮಹಿಳೆ ಬಂಧನ

Spread the love

ಉತ್ತರ ಕನ್ನಡ; ಭಟ್ಕಳದ ನವಾಯತ್​ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ ಕೇರಾಫ್ ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು ಗುರುತಿಸಲಾಗಿದೆ.
ಪಾಕಿಸ್ತಾನದ ನಾಗರೀಕತ್ವ ಹೊಂದಿರುವ ಮಹಿಳೆ ಕಳ್ಳ ಮಾರ್ಗದ ಮೂಲಕ ಭಟ್ಕಳಕ್ಕೆ 8 ವರ್ಷಗಳ ಹಿಂದೆಯೇ ಆಗಮಿಸಿ ಅಕ್ರಮವಾಗಿ ವಾಸವಾಗಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು.‌ ನವಾಯತ್​ ಕಾಲೋನಿಯಲ್ಲಿ ಜಾವೀದ್ ಮೊಹಿದ್ದೀನ್ ರುಕ್ಕುದ್ದೀನ್ ಎಂಬಾತನನ್ನು ದುಬೈನಲ್ಲಿ ವಿವಾಹವಾಗಿ 2014ರಲ್ಲಿ 3 ತಿಂಗಳು ವಿಸಿಟಿಂಗ್ ವೀಸಾದ ಮೇಲೆ ಭಾರತಕ್ಕೆ ಬಂದು ಹಿಂತಿರುಗಿದ್ದಳು. ಪುನಃ 2016ರ ಪ್ರಾರಂಭದಲ್ಲಿ ಕಳ್ಳ ಮಾರ್ಗವಾಗಿ ಭಾರತಕ್ಕೆ ನುಸುಳಿ ಬಂದು ತನ್ನ ಗಂಡನ ಮನೆಯಾದ ಭಟ್ಕಳದ ನವಾಯುತ ಕಾಲೋನಿಯಲ್ಲಿ ಮಕ್ಕಳೊಂದಿಗೆ ವಾಸವಾಗಿದ್ದಳು.
ಭಟ್ಕಳದಲ್ಲಿ ಸುಳ್ಳು ದಾಖಲೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿ ರೇಶನ್ ಕಾರ್ಡ್, ಜನನ ಪ್ರಮಾಣಪತ್ರ, ಆಧಾರ್​ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದಕೊಂಡಿದ್ದಳು. ದಾಳಿ ವೇಳೆ ಪೊಲೀಸರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಈಕೆಯ ವಿರುದ್ಧ ವಿದೇಶಿ ಕಾಯ್ದೆ ಉಲ್ಲಂಘನೆ ಮತ್ತು ಇತರೆ ಐಪಿಸಿ ಪ್ರಕರಣಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

Leave a Reply

error: Content is protected !!