ವರುಣನ ಆರ್ಭಟಕ್ಕೆ ಬೆಚ್ಚಿಬಿದ್ದ ಕರುನಾಡು- ಇಬ್ಬರು ಬಲಿ

Spread the love

ಬೆಂಗಳೂರು : ಕಳೆದೊಂದು ವಾರದಿಂದ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಬೇಸಿಗೆ ಮಳೆ ಭಾರೀ ಕೊಲಾಹಲ ಸೃಷ್ಟಿಸಿದೆ. ನಿನ್ನೆ ಸುರಿದ ಮಳೆ ಹಾಗೂ ಸಿಡಿಲಿಗೆ ಕರುನಾಡು ಬೆಚ್ಚಿಬಿದ್ದಿದ್ದು, ಇಬ್ಬರೂ ಸಿಡಿಲಿಗೆ ಬಲಿಯಾಗಿದ್ದಾರೆ.
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ಮಳೆ ಪ್ರಬಲವಾಗಿದೆ. ಮಳೆಯೊಂದಿಗೆ ಬಡಿದ ಸಿಡಿಲಿಗೆ ಮಹಿಳೆ ಸೇರಿ ಇಬ್ಬರು ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಪ್ರತ್ಯೇಕ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು, ಕಲಬುರಗಿ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಅನೇಕ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಟ್ಟಾರೆ ರಾಜ್ಯದಲ್ಲಿ ಮಳೆ ಸಂಬಂಧಿ ಕಾರಣಗಳಿಗೆ 80ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಕುರಿಗಾಹಿ ನಿಂಗಪ್ಪ (30) ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೀದರ್‌ ಜಿಲ್ಲೆ ಖಟಕಚಿಂಚೋಳಿ ಗ್ರಾಮದ ಹೊಲದಲ್ಲಿ ತೊಗರಿ ಬೆಳೆಯ ಕಳೆ ತೆಗೆಯುತ್ತಿದ್ದ ಪಾರ್ವತಿ ನಂದಕುಮಾರ್‌ ಕಂಠಿ (48) ಸಿಡಿಲು ಬಡಿದು ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದಲ್ಲಿ 14 ಕುರಿಗಳು, ರಾಯಚೂರು ಜಿಲ್ಲೆಯ ಮುದಗಲ್‌ ತಾಲೂಕಿನ ಮಟ್ಟೂರ ಗ್ರಾಮದಲ್ಲಿ 10 ಆಡು, 10 ಕುರಿಗಳು ಸಿಡಿಲಿಗೆ ಮೃತಪಟ್ಟಿವೆ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟಾರೆ 562 ಎಕರೆಯಷ್ಟು ಭತ್ತ, ಅಡಕೆ, ಬಾಳೆ ಬೆಳೆಗಳಿಗೆ ಹಾನಿಯಾಗಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.


Spread the love

Leave a Reply

error: Content is protected !!