ಬಾಗಲಕೋಟೆ : ಐತಿಹಾಸಿಕ ಮಹಾಕೂಟೇಶ್ವರ ರಥೋತ್ಸವದ ವೇಳೆ ಅವಘಡವೊಂದು ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಹಾಕೂಟದ ಮಹಾ ರಥೋತ್ಸವ ನಿನ್ನೆ ಬಹಳ ಸಂಭ್ರಮ ಸಡಗರದಿಂದ ನಡೆಯುತ್ತಿತ್ತು. ಇದೇ ವೇಳೆ
ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರಿಗೆ ಗಂಭೀರ ಗಾಯಗೊಂಡ್ರೆ, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ನಿನ್ನೆ ಸಾಯಂಕಾಲ ನಡೆದ ಮಹಾರಥೋತ್ಸವದ ವೇಳೆ ಈ ಅವಘಡ ಸಂಭವಿಸಿದೆ.
ಬಾದಾಮಿ ತಾಲೂಕಿನ ಯಂಕಂಚಿ ಗ್ರಾಮದ
ಮಹಾಗುಂಡಪ್ಪ ಗಾಳಿ(34) ಚಿಕಿತ್ಸೆ ಫಲಿಸದೇ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ನಂದಿಕೇಶ್ವರ ಗ್ರಾಮದ ಮಲ್ಲಪ್ಪ ಶಿರೂರ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡಿದ್ದಾನೆ.
Check Also
ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ
Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …