Breaking News

ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಮಠಾಧೀಶರು ಅಖಾಡಕ್ಕೆ ರುದ್ರಮುನಿ ಶ್ರೀ

Spread the love

ಹುಬ್ಬಳ್ಳಿ: ಬೇಡ ಜಂಗಮ ಸಮುದಾಯಕ್ಕೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಮೀಸಲಾತಿ ಸೌಲಭ್ಯ ಸರಕಾರ ಕಲ್ಪಿಸಬೇಕು ಹಾಗೂ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ದಾಖಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ತಿಪಟೂರು ರುದ್ರಮುನಿ ಸ್ವಾಮೀಜಿ ಆಗ್ರಹಿಸಿದರು.
ನಗರದ ಮೂರುಸಾವಿರಮಠದ ಶಾಲಾ ಆವರಣದ ಸಭಾಭವನದಲ್ಲಿ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದಿಂದ ರಾಜ್ಯದ ವಿವಿಧ ಭಾಗಗಳ ಮಠಾಧೀಶರು ನಡೆಸಿದ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸರಕಾರ ನಮ್ಮ ನ್ಯಾಯ ಬದ್ಧವಾದ ಬೇಡಿಕೆ ಈಡೇರಿಸಬೇಕು ಹಾಗೂ ನಮಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಎಲ್ಲಾ ಮಠಾಧೀಶರು ಬೇಡ ಜಂಗಮ ಚಳವಳಿ ನಡೆಸಲಾಗುವುದು ಎಂದರು.
ನಮ್ಮ ನ್ಯಾಯ ಪರವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಾಗೂ ಸಮಾಜದ ಧ್ವನಿ ಎತ್ತುವ ಸಲುವಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಮಠಾಧೀಶರು ಕಣಕ್ಕಿಳಿಯಲಿದ್ದಾರೆ. ಈ ಕುರಿತು ಸಿದ್ಧತೆ ಮಾಡಿದ್ದು, ರಾಜಕೀಯ ಪಕ್ಷದ ಪರವಾಗಿ ನಿಲ್ಲಬೇಕೋ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಒಂದು ವೇಳೆ ಸರಕಾರ ನಮ್ಮ ಮೀಸಲಾತಿ ಬೇಡಿಕೆಗೆ ಸ್ಪಂದಿಸಿದರು ಕೂಡ ಮಠಾಧೀಶರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದರು.
ಬೇಡ ಜಂಗಮರಿಗೆ ಮೀಸಲಾತಿ ಬೇಡ ಎನ್ನುವುದಕ್ಕೆ ದಿ. ಡಾ. ಎಂ.ಎಂ. ಕಲಬುರ್ಗಿ ಅವರು ನಮ್ಮ ಸಮಾಜದವರಲ್ಲ. ಹೀಗಾಗಿ ಅವರು ಹಿಂದೊಮ್ಮೆ ಸಾರ್ವಜನಿಕವಾಗಿ ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಈಗ ಅವರು ಸಹ ಇಲ್ಲ ಆ ವಿಷಯ ಚರ್ಚೆ ಈ‌ ಸಂದರ್ಭದಲ್ಲಿ ಬೇಡಾ ಎಂದರು.


Spread the love

About Karnataka Junction

[ajax_load_more]

Check Also

ಹೆಣ್ಣು ಮಕ್ಕಳೇ ಸ್ಟಾಂಗು ಗುರು ಕಾರ್ಯಕ್ರಮ ಸ್ಟಾರ್ ಸುವರ್ಣ ಚಾಲನೆ

Spread the loveಹುಬ್ಬಳ್ಳಿ: ನಗರದ ವಿನೂತನ ಪೌಂಡೇಶನ್ ಹುಬ್ಬಳ್ಳಿ ಅಧ್ಯಕ್ಷರು ಅಕ್ಕಮ್ಮಾ ಕಂಬಳಿ ಮುಂತಾದವರ ನೇತೃತ್ವದಲ್ಲಿ ಹೆಣ್ಣು ಮಕ್ಕಳೇ ಸ್ಟಾಂಗು …

Leave a Reply

error: Content is protected !!