ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್​ದಾರರಿಗೆ 75 ಯುನಿಟ್ ಉಚಿತ ವಿದ್ಯುತ್​

Spread the love

ಬೆಂಗಳೂರು: ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್​ದಾರರಿಗೆ 75 ಯುನಿಟ್​ವರೆಗೆ ನೀಡುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಲಾಗಿದೆ. ಈ ಯೋಜನೆಯನ್ನು ಗ್ರಾಮೀಣ ಭಾಗಕ್ಕೆ ಮಾತ್ರ ಸೀಮಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಹಳೆ ಆದೇಶವನ್ನು ಹಿಂದಕ್ಕೆ ಪಡೆದು ಸರ್ಕಾರ ಹೊಸ ಆದೇಶ ಮಾಡಿದೆ.
ಆದೇಶ ಪ್ರತಿಇದೀಗ ನಗರ ಪ್ರದೇಶಕ್ಕೂ ವಿಸ್ತರಿಸಿರುವುದರಿಂದ ರಾಜ್ಯಾದ್ಯಂತ ಈ ಯೋಜನೆ ಜಾರಿಯಾದಂತಾಗಿದೆ. ಮೇ 1ರಿಂದಲೇ ಪೂರ್ವಾ ನ್ವಯವಾಗುವಂತೆ ಆದೇಶ ಹೊರಡಿಸಿದ್ದು, ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಗೃಹ ಬಳಕೆದಾರರು ಇನ್ನು ಮುಂದೆ 75 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲಿದ್ದಾರೆ. ಮಾಸಿಕ ವಿದ್ಯುತ್ ಬಿಲ್ಲನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಪಾವತಿಸಿದ ನಂತರ ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ 75 ಯುನಿಟ್‌ನ ಹಣ ಮರು ಪಾವತಿಸಲಾಗುವುದು.
ಆದೇಶ ಪ್ರತಿಮೀಟರ್ ಅಳವಡಿಕೆ ಕಡ್ಡಾಯವಾಗಿದ್ದು ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರದ ದೃಢೀಕೃತ ದಾಖಲೆಗಳನ್ನು ಒದಗಿಸಬೇಕು. ವಿದ್ಯುತ್ ಸರಬರಾಜು ಕಂಪನಿಗಳಿಗೆ ಬ್ಯಾಂಕ್ ಖಾತೆಯ ಸಂಖ್ಯೆ ನೀಡಬೇಕು. ಏಪ್ರಿಲ್ 30ರೊಳಗೆ ಬಾಕಿ ಇರುವ ವಿದ್ಯುತ್ ಶುಲ್ಕವನ್ನು ಸಂಪೂರ್ಣವಾಗಿ ಪಾವತಿಸಿದರೆ ಮಾತ್ರ ಸೌಲಭ್ಯ ಪಡೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


Spread the love

About gcsteam

    Check Also

    ಪಿಯುಸಿಯಲ್ಲಿ ರಾಜ್ಯಕ್ಕೆ 3ನೇ ರಾಂಕ್: ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿ ಮಹತ್ವದ ಸಾಧನೆ

    Spread the loveಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ವಿದ್ಯಾಸಂಸ್ಥೆ. ಈ ಸಂಸ್ಥೆ ಒಂದಿಲ್ಲೊಂದು ರೀತಿಯಲ್ಲಿ ಸಾಧನೆ ಮಾಡುತ್ತ ಬಂದಿದೆ. …

    Leave a Reply