Breaking News

ದಿ ಗ್ರೇಟ್‌ ಬ್ಯುಸಿನೆಸ್ ಫ್ಯಾಮಿಲಿ ರಾಜಕೀಯಕ್ಕೆ ಎಂಟ್ರಿ?

Spread the love

ಹೈದರಾಬಾದ್ : ಭಾರತದ ದೊಡ್ಡ ಉದ್ಯಮಿ ಕುಟುಂಬವೊಂದು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದೆ. ಹೌದು, ಉದ್ಯಮಿ ಗೌತಮ್ ಅದಾನಿ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೂನ್ 10ರಂದು ಆಂಧ್ರಪ್ರದೇಶದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಈ ಎಲ್ಲ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಇದಕ್ಕೆ ಜಗನ್ ರೆಡ್ಡಿ ಸಹ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಗೌತಮ್ ಅದಾನಿ ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


Spread the love

About Karnataka Junction

    Check Also

    ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ

    Spread the loveಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ- ಟೆಂಗಿನಕಾಯಿ ಹುಬ್ಬಳ್ಳಿ: ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ …

    Leave a Reply

    error: Content is protected !!