https://youtu.be/Fj-o4WLswEE
ಹುಬ್ಬಳ್ಳಿ; ಉಚಿತವಾಗಿ ಲಸಿಕೆ ಕೊಡಿ ಇಲ್ಲವೇ ಅಧಿಕಾರ ಬಿಡಿ ಅಂತ ಕರವೇ ಕಾರ್ಯಕರ್ತರು ನಗರದ ಚೆನ್ನಮ್ಮ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಲಸಿಕೆ ವಿರುದ್ಧ ಧಿಕ್ಕಾರ ಕೂಗಿ ಕರವೇ ಕಾರ್ಯಕರ್ತರು ಪ್ರತಿಭಟಿಸಿದರು. ಕರವೇ ಸಾಮಾಜಿಕ .ಜಾಲತಾಣದ ರಾಜ್ಯ ಸಂಘಟನೆ ಕಾರ್ಯದರ್ಶಿ ಸಚಿನ್ ಗಾಣಿಗೇರ ನೇತೃತ್ವದಲ್ಲಿ
ಪ್ರತಿಭಟನೆ ನಡೆಸಲಾಯಿತು. ಜೂನ್ ನಲ್ಲಿ ಫಸ್ಟ್ ಡೋಸ್, ಸೆಪ್ಟೆಂಬರ್ ನಲ್ಲಿ 2ನೇ ಡೋಸ್ ನೀಡುವಂತೆ ಒತ್ತಾಯಿಸಿದರು. ಉಚಿತವಾಗಿ ಲಸಿಕೆ ನೀಡಿ ಜನರ ಜೀವ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಆಗ್ರಹ ಮಾಡಿದ್ರು. ಸರ್ಕಾರ ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಗೆ ಕಡಿವಾಣ ಹಾಕಬೇಕುವಂತೆ ಒತ್ತಾಯಿಸಿದರು.
ದೇಶದಲ್ಲಿ ಅಕ್ಟೋಬರ್ ವೇಳೆಗೆ ಕೋವಿಡ್ ಮೂರನೇ ಅಲೆ ಆರಂಭವಾಗಲಿದ್ದು, ಅಷ್ಟರೊಳಗೆ ಲಸಿಕೆ ಪಡೆಯದವರ ಜೀವಗಳು ಅಪಾಯಕ್ಕೆ ಸಿಲುಕಲಿವೆ. ಇದಕ್ಕೆ ಅವಕಾಶ ಕೊಡಬಾರದು. ರಾಜ್ಯದ ಪ್ರತಿ ಪ್ರಜೆಗೂ ಸೆಪ್ಟೆಂಬರ್ ತಿಂಗಳೊಳಗೆ ಉಚಿತವಾಗಿ 2 ಡೋಸ್ ಲಸಿಕೆ ನೀಡಬೇಕು. ಖಾಸಗಿ ಆಸ್ಪತ್ರೆಗಳ ಲಸಿಕೆ ದಂಧೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಜಾರಿಯಾಗಿರುವ ಲಾಕ್‌ಡೌನ್‌ನಿಂದ ದೇಶದಲ್ಲಿ ಬಡತನ, ನಿರುದ್ಯೋಗ ಹೆಚ್ಚಿದೆ. ಜನರು ಹಸಿವಿನಿಂದ ಸಾಯುತ್ತಿದ್ದಾರೆ. ಕಳೆದ ವರ್ಷದಿಂದಲೂ ಸರ್ಕಾರಗಳು ಜನರ ಮೇಲೆ ಜವಾಬ್ದಾರಿ ಹೊರಿಸಿದವೇ ಹೊರತು ಜನರ ಜೀವ ರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿಲ್ಲ ಆದಷ್ಟು ಬೇಗ ಕ್ರಮ ಕೈಕೊಳ್ಳಬೇಕು ಎಂದು ಒತ್ತಾಯಿಸಿದರು.