ಧಾರವಾಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Spread the love

ಹುಬ್ಬಳ್ಳಿ; ಬಿಟ್ಡು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಧಾರವಾಡ ಜಿಲ್ಲೆ ಅಕ್ಷರಶಃ ತತ್ತರಿಸಿದ್ದು ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗ ತತ್ತರಿಸಿದ್ದು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ರಜೆ ಆದೇಶ ಹೊರಡಿಸಿದ್ದು, ‘ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.,20ರ ಶುಕ್ರವಾರ ಒಂದು ದಿನ ರಜೆ ಘೋಷಿಸಲಾಗಿದೆ’ ಎಂದು ಆದೇಶ ಹೊರಡಿಸಿದ್ದಾರೆ.
ಗುರುವಾರ ಸಂಜೆಯಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದೆ.ನಿತ್ಯ ಕೆಲಸ ಕಾರ್ಯಗಳಿಗೆ ಹೊರಡುವ ಜನರು ಬೆಳಗ್ಗೆಯೇ ಕಿರಿಕಿರಿ ಅನುಭವಿಸಿದ್ದಾರೆ. ಮತ್ತೊಂದೆಡೆ ವಾಹನ ಸವಾರರು ಕೂಡ ಮಳೆಯ ಕಾರಣದಿಂದ ಜನರು ಮನೆ ಬಿಟ್ಟು ಹೋರಬರದ ಪರಿಸ್ಥಿತಿ ನಿರ್ಮಾಣವಾಗಿದೆ


Spread the love

Leave a Reply

error: Content is protected !!