ಧಾರವಾಡ : ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 1 ನೇ ಹೆಚ್ಚುವರಿ ಹಾಗೂ 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ವಿಚಾರಣೆಗಾಗಿ ಒಳಪಡುವ ಪ್ರಕರಣಗಳನ್ನು ಈ ವರೆಗೂ ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದಾಖಲಾಗಿ ಹುಬ್ಬಳ್ಳಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಗಳಿಗೆ ಕಳುಹಿಸಲಾಗುತ್ತಿತ್ತು. ಈಗ ಅಂತಹ ಪ್ರಕರಣಗಳನ್ನು ಹುಬ್ಬಳ್ಳಿಯಲ್ಲಿಯೇ ದಾಖಲಿಸುವ ಕುರಿತು ಕರ್ನಾಟಕ ಉಚ್ಘ ನ್ಯಾಯಾಲಯ ಅನುಮತಿ ನೀಡಿದೆ.
ಹುಬ್ಬಳ್ಳಿ ವಕೀಲರ ಸಂಘದ ಕೋರಿಕೆಯನ್ನು ಮತ್ತು ಧಾರವಾಡ ಪ್ರಧಾನ ಜಿಲ್ಲಾ ಸತ್ರ ನ್ಯಾಯಾದೀಶರ ಮನವಿ ಮತ್ತು ಪ್ರಯತ್ನದಿಂದಾಗಿ ವಿಶೇಷ ಪ್ರಕರಣಗಳನ್ನು ಹೊರತುಪಡಿಸಿ, ಹುಬ್ಬಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ನ್ಯಾಯಾಲಗಳ ವ್ಯಾಪ್ತಿಯಲ್ಲಿ ವಿಚಾರಣೆಯಾಗುವ ಪ್ರಕರಣಗಳನ್ನು ಜೂನ್ 11 ರಿಂದ ಹುಬ್ಬಳ್ಳಿಯಲ್ಲಿಯೇ ದಾಖಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಧಾರವಾಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಶ್ರೀನಿವಾಸ ಹರೀಶಕುಮಾರ ಅವರು ಅನುಮತಿ ನೀಡಿದ್ದಾರೆ.
1 ಮತ್ತು 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಗಳ ವ್ಯಾಪ್ತಿಗೆ ವಿಚಾರಣೆಗೆ ಒಳಪಡುವ ಕೆಲವು ವಿಶೇಷ ಪ್ರಕರಣಗಳನ್ನು ಹೊರತುಪಡಿಸಿ, ಉಳಿದ ಪ್ರಕರಣಗಳನ್ನು ಹುಬ್ಬಳ್ಳಿಯಲ್ಲಿಯೇ ದಾಖಲಿಸಬಹುದೆಂದು ಪ್ರಧಾನ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Check Also
ಹೆಣ್ಣು ಮಕ್ಕಳೇ ಸ್ಟಾಂಗು ಗುರು ಕಾರ್ಯಕ್ರಮ ಸ್ಟಾರ್ ಸುವರ್ಣ ಚಾಲನೆ
Spread the loveಹುಬ್ಬಳ್ಳಿ: ನಗರದ ವಿನೂತನ ಪೌಂಡೇಶನ್ ಹುಬ್ಬಳ್ಳಿ ಅಧ್ಯಕ್ಷರು ಅಕ್ಕಮ್ಮಾ ಕಂಬಳಿ ಮುಂತಾದವರ ನೇತೃತ್ವದಲ್ಲಿ ಹೆಣ್ಣು ಮಕ್ಕಳೇ ಸ್ಟಾಂಗು …