Breaking News

ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿ ಹೋಗಿದ್ದ ಜನತೆಗೆ ಸಂತಸದ ಸುದ್ದಿ

Spread the love

ನವದೆಹಲಿ : ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿ ಹೋಗಿದ್ದ ಜನತಗೆ ಶನಿವಾರ ಸಂತಸದ ಸುದ್ದಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನೀಡಿದ್ದಾರೆ. ಪೆಟ್ರೋಲ್‌ ಮೇಲಿನ 8 ರೂಪಾಯಿ ತೆರಿಗೆ ಮತ್ತು ಡೀಸೆಲ್‌ ಮೇಲಿನ 6 ರೂಪಾಯಿ ಅಬಕಾರಿ ಸುಂಕವನ್ನು ಇಳಿಕೆ ಮಾಡಲಾಗಿದೆ. ಈ ಮೂಲಕ ಪೆಟ್ರೋಲ್‌ ಬೆಲೆ ದೇಶಾದ್ಯಂತ ರೂ. 9.50 ಮತ್ತು ಡೀಸೆಲ್‌ ಬೆಲೆ ರೂ. 7 ಕಡಿಮೆಯಾಗಲಿದೆ. ದಿನಬಳಕೆ ವಸ್ತುಗಳು, ಹಣ್ಣು – ತರಕಾರಿ, ಸೋಪು, ಶಾಂಪೂ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಯೂ ಗಗನಕ್ಕೇರಿದ್ದು, ಈ ಬೆಲೆ ಇಳಿಕೆಯ ನಿರ್ಧಾರದಿಂದ ಜನಸಾಮಾನ್ಯರಿಗೆ ದೊಡ್ಡಮಟ್ಟದ ಸಹಾಯವಾಗಲಿದೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ತಲಾ ರೂ 8 ಮತ್ತು ರೂ. 6 ಕಡಿಮೆ ಮಾಡಲಾಗಿದೆ ಎಂದಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಇಂದಿನ ಬೆಲೆಗಿಂತ ಪೆಟ್ರೋಲ್‌ಗೆ ರೂ 9.50 ಕಡಿಮೆಯಾಗಲಿದ್ದು, ಡೀಸೆಲ್‌ ಒಂದು ಲೀಟರ್‌ ಗೆ ರೂ 7 ಕಡಿಮೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Karnataka Junction

[ajax_load_more]

Check Also

ವಿದ್ಯಾಮಂತ್ರಿಗೆ ಕನ್ನಡ ಬರಲ್ಲ” ಎಂದಿರುವ ವಿದ್ಯಾರ್ಥಿ ಮೇಲೆ ಇಂಗ್ಲೀಷ್ ನಲ್ಲೇ ಕ್ರಮಕ್ಕೆ ಸೂಚನೆ ಅಕ್ಷಮ್ಯ

Spread the loveಹುಬ್ಬಳ್ಳಿ: ‘ವಿದ್ಯಾಮಂತ್ರಿಗೆ ಕನ್ನಡ ಬರಲ್ಲ’ ಎಂದ ವಿದ್ಯಾರ್ಥಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷೆ ವಿಧಿಸಲು ಸೂಚಿಸಿರುವುದು …

Leave a Reply

error: Content is protected !!