ಛತ್ತೀಸ್‌ಗಢ: ಛತ್ತೀಗಢದ ಸರ್ಗುಜಾದಲ್ಲಿ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಂತಹ ಘಟನೆ ತಡರಾತ್ರಿ ನಡೆದಿದೆ. ಸುರ್ಗುಜಾ ಅರಣ್ಯದಲ್ಲಿ ಬಾಲಕಿಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ, ಆಕೆಯ ಪ್ರಿಯಕರನನ್ನು ಥಳಿಸಿದ್ದಾರೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತನೂ ಇದ್ದಾನೆ.
ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯ ಬಳಿಕ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 2 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
