ಹುಬ್ಬಳ್ಳಿ; ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ಸಾವಿನ ಹೆದ್ದಾರಿ ಎಂದು ಬಿಂಬಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯೂ ಆಗಿರೋ ಇಲ್ಲಿ, ಆಗಾಗ ಅಪಘಾತಗಳು ಸಂಭವಿಸುತ್ತಲೇ ಇರುತ್ತೆ. ಈ ಹಿನ್ನೆಲೆಯಲ್ಲಿ ಇದನ್ನು ದಶ ಪಥ ರಸ್ತೆಯನ್ನಾಗಿಸೋಕೆ ಶಿಲನ್ಯಾಸ ನೆರವೇರಿಸಲಾಗಿತ್ತು. ಇದರ ಬೆನ್ನ ಹಿಂದೆಯೇ ಇದೇ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಹಾಗೂ ಲಾರಿಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಂಟು ಜನ ಸಾವನ್ನಪ್ಪಿದ್ದು ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಸ್ಥಳದಲ್ಲಿಯೇ ಆರು ಜನರ ಸಾವನ್ನಪ್ಪಿದ್ದರೆ, ಓರ್ವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾನೆ. ಘಟನೆಯಲ್ಲಿ 25 ಜನರಿಗೆ ಗಾಯಗಳಾಗಿವೆ. ಕೆಲವರ ಸ್ಥಿತಿ ಗಂಭೀರವಾಗಿದೆ.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …