ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ. ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ, ಲಕ್ಷ್ಮಣ ಸವದಿ, ಕೇಶವ ಪ್ರಸಾದ್ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಸವರಾಜ ಹೊರಟ್ಟಿ ಹೆಸರು ಅಂತಿಮಗೊಳಿಸಿ ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಿದೆ.
ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು. ಅಂತೆಯೇ ಸಂಭಾವ್ಯ ಅಭ್ಯರ್ಥಿಗಳು ಪಕ್ಷದ ಕಚೇರಿಗೆ ಆಗಮಿಸಿ, ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಆದ್ರೆ ಅಚ್ಚರಿಯ ಬೆಳವಣಿಗೆಯಲ್ಲಿ ಲಕ್ಷಣ ಸವದಿಗೆ ಮತ್ತೆ ಟಿಕೆಟ್ ಸಿಕ್ಕಿದೆ. ಜೂನ್ 3ರಂದು ವಿಧಾನ ಪರಿಷತ್ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾದ ಬಸವರಾಜ ಹೊರಟ್ಟಿ ಅವರಿಗೆ ಕೊಟ್ಟ ಭರವಸೆಯಂತೆ ಪಶ್ಚಿಮ ಶಿಕ್ಷಕರ ಕ್ಷೇತ್ರ ಟಿಕೆಟ್ ನೀಡಲಾಗಿದೆ.
