ನವದೆಹಲಿ: ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಘೋಷಿಸಿದ್ದಾರೆ. ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದೀಗ ಮೋದಿ ಮೃತರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಿಸಲಾಗಿದೆ. ಈ ಕುರಿತು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ದುರ್ಘಟನೆ ತೀವ್ರ ನೋವು ತಂದಿದೆ. ಈ ಅಪಘಾತದಲ್ಲಿ ಪ್ರಾಣಹಾನಿಯಾಗಿರುವುದು ದುಃಖದ ವಿಚಾರ. ದುಃಖಿತ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …