ನರೇಂದ್ರ ಮೋದಿ ಪ್ರಧಾನಿಯಾಗಿ ಇಂದೀಗೆ 8 ವರ್ಷಗಳು ಭರ್ತಿ

Spread the love

ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದು 8 ವರ್ಷ ಪೂರ್ಣಗೊಳ್ಳಲಿದೆ.ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಂಭ್ರಮ ಆಚರಣೆಗೆ ಸಿದ್ಧತೆ ನಡೆದಿದೆ.
ಈ ದಿನದಂದು ಅವರು ಚೆನ್ನೈ ಹಾಗೂ ಹೈದರಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮೋದಿ ಅವರು ಮೊದಲ ಬಾರಿ 2014ರ ಮೇ 26ರಂದು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅದಾದ ನಂತರ 2019ರಲ್ಲಿ ಪುನಃ ಅಧಿಕಾರಕ್ಕೆ ಬಂದಿದ್ದರು. 2ನೇ ಅವಧಿಯಲ್ಲಿ ಅವರು ಮೇ 30ರಂದು ಪ್ರಮಾಣವಚನ ಸ್ವೀಕಾರ ಮಾಡಿದ್ದರು.
ಮೋದಿ ಅಧಿಕಾರಕ್ಕೆ ಬಂದು 8 ವರ್ಷ ತುಂಬಿದ ಸಂಭ್ರಮಾಚರಣೆ ಮೇ 26ರ ಬದಲು, ಅವರು 2ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ದಿನಾಂಕವಾದ ಮೇ 30ರಿಂದ ಏರ್ಪಾಟಾಗಿದೆ. ಬಿಜೆಪಿ ಮೇ 30ರಿಂದ 15 ದಿನ ಕಾಲ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಬೆಂಗಳೂರು ಮತ್ತು ಚೆನ್ನೈ ನಡುವಿನ 262 ಕಿ.ಮೀ. ದೂರದ ಎಕ್ಸ್‌ಪ್ರೆಸ್‌ ವೇ ಸೇರಿದಂತೆ 31,400 ಕೋಟಿ ಮೌಲ್ಯದ 11 ಯೋಜನೆಗಳಿಗೆ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ನಡುವೆ, ಹೈದರಾಬಾದ್‌ನ ಇಂಡಿಯನ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌ನ 20ನೇ ವರ್ಷದ ಕಾರ್ಯಕ್ರಮದಲ್ಲಿ ಕೂಡ ಅವರು
ಅಂದು ಭಾಗಿಯಾಗಲಿದ್ದಾರೆ.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply