Breaking News

ಸಿಎಂ ತವರು ಕ್ಷೇತ್ರದಲ್ಲಿ ಶಿಗ್ಗಾಂವಿಯ ಶೂಟೌಟ್ ಪ್ರಕರಣ ಮಾಸುವ ಮುನ್ನವೇ ಅದೇ ಕ್ಷೇತ್ರದಲ್ಲಿ ಇನ್ನೊಂದು ಗುಂಡಿನ ದಾಳಿ

Spread the love

ಹಾವೇರಿ: ಶಿಗ್ಗಾಂವಿಯ ಶೂಟೌಟ್ ಪ್ರಕರಣ ಮಾಸುವ ಮುನ್ನವೇ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದಲ್ಲಿ ಫೈರಿಂಗ್ ನಡೆದಿದೆ.
ಗ್ರಾಮದ ಮಹಿಳೆ ಸಲ್ಮಾ ಮನೆಯ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಬೈಕ್ ಮೇಲೆ ಬಂದಿದ್ದ ಮುಸುಕುಧಾರಿಗಳು ಗುಂಡು ಹಾರಿಸಿದ್ದಾರೆ. ಅದೇ ವೇಳೆಯಲ್ಲಿ ಕರೆಂಟ್ ಹೋಗಿದ್ದು, ಕತ್ತಲಾಗಿದ್ದರಿಂದ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡು ಮಹಿಳೆ ಮನೆಯೊಳಗೆ ಓಡಿ ಹೋಗಿದ್ದಾಳೆ. ಇದರಿಂದಾಗಿ ಮನೆಯ ಗೋಡೆಗೆ ಒಳಗೆ ಗುಂಡು ತಾಗಿದೆ. ಹೀಗಾಗಿ ಗುಂಡಿನ ದಾಳಿಯಲ್ಲಿ ಮಹಿಳೆ ಹಾಗೂ ಮಹಿಳೆಯ ಮನೆಯವರು 14 ಜನರು ಪಾರಾಗಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಬೆಚ್ಚಿಬಿದ್ದ ಅಲ್ಲಿನ ಜನರು ಸಲ್ಮಾಳ ಮನೆ ಬಳಿ ಜಮಾಯಿಸಿದ್ದಾರೆ. ಅಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಸಲ್ಮಾಳಿಗೆ ಕೆಲವು ವರ್ಷಗಳ ಹಿಂದೆ ಮದುವೆ ಆಗಿತ್ತು. ಮೂವರು ಮಕ್ಕಳಿದ್ದಾರೆ. ಪತಿ ಜಗಳ ಮಾಡಿಕೊಂಡಿದ್ದರಿಂದ ಸಲ್ಮಾ ಎರಡು ವರ್ಷಗಳಿಂದ ತವರುಮನೆ ಹುಲಗೂರು ಗ್ರಾಮದಲ್ಲಿ ವಾಸವಾಗಿದ್ದಾರೆ. ಆದರೆ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಮುಸುಕುಧಾರಿಗಳು ಬಂದೂಕಿನಿಂದ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಸಲ್ಮಾ, ಆಕೆಯ ಮಕ್ಕಳು, ತಂದೆ ಮತ್ತು ಅಣ್ಣತಮ್ಮಂದಿರು ಸೇರಿದಂತೆ ಒಟ್ಟು ಹದಿನಾಲ್ಕು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ದುಷ್ಕರ್ಮಿಗಳ ಬಂದೂಕಿನಿಂದ ಒಂದು ಸುತ್ತು ಗುಂಡು ಹಾರಿದೆ. ವಿಷಯ ತಿಳಿಯುತ್ತಿದ್ದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಎಸ್‍ಪಿ ವಿಜಯ್‍ಕುಮಾರ್ ಸೇರಿದಂತೆ ಶಿಗ್ಗಾಂವಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Karnataka Junction

[ajax_load_more]

Check Also

ಕೋಚಿಂಗ್ ಸೆಂಟರ್ ಗಳ ಸೇವಾ ನ್ಯೂನ್ಯತೆ; ಬಿಸಿ ಮುಟ್ಟಿಸಿದ NCH*

Spread the love*-600 ಪ್ರಕರಣಗಳಲ್ಲಿ ವಂಚಿತ ಅಭ್ಯರ್ಥಿಗಳಿಗೆ ನ್ಯಾಯದಾನ; ಒಟ್ಟು ₹ 1.56 ಕೋಟಿ ಪರಿಹಾರ* *- ಬರೀ ವ್ಯವಹಾರಿಕವಾಗಿರದೆ …

Leave a Reply

error: Content is protected !!