ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಹಿಜಾಬ್ಗೆ ನಿರ್ಬಂಧ ಇದ್ದರೂ ವಿದ್ಯಾರ್ಥಿನಿಯರು ಧರಿಸಿಕೊಂಡೇ ಬರುತ್ತಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ದೂರಿದರು.
ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ. ನಿಯಮದಂತೆ ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ. ಆದರೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಆದ್ದರಿಂದ ಹಿಜಾಬ್ ವಿರುದ್ಧ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಪ್ರಾಂಶುಪಾಲರು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು. ಆದರೆ, ಅದು ಸಫಲವಾಗಲಿಲ್ಲ. ತಕ್ಷಣದಿಂದಲೇ ಹಿಜಾಬ್ ಧರಿಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …