Breaking News

ಸೋಲಿನ ಭಯ ನನಗಿಲ್ಲ: ಬಸವರಾಜ ಹೊರಟ್ಟಿ

Spread the love

ಧಾರವಾಡ: ಸೋಲಿನ ಭಯ ನನಗಿಲ್ಲ. ನಾನು ಈ ಹಿಂದೆ ಅನೇಕ ಪಕ್ಷಗಳಿಂದ ಚುನಾಯಿತನಾಗಿ ಬಂದಿದ್ದೇನೆ. ನನ್ನನ್ನು ಚುನಾಯಿತಗೊಳಿಸಿದವರು ಶಿಕ್ಷಕರು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ವಿರೋಧ ಪಕ್ಷದವರು ನಮಗೇ ಮತ ಹಾಕಿ ಎಂದು ಹೇಳುವುದಿಲ್ಲ. ಏನಾದರೂ ಮಾತನಾಡಬೇಕು ಎಂಬ ಉದ್ದೇಶದಿಂದ ಸೋಲಿನ ಭಯದಿಂದ ಬಸವರಾಜ ಹೊರಟ್ಟಿ ಬಿಜೆಪಿಗೆ ಹೋಗಿದ್ದಾರೆ ಎಂಬ ಹೇಳಿಕೆ ಕೊಟ್ಟಿದ್ದಾರೆ. ಇವರ ಹೇಳಿಕೆಗೆ ಜೂ.15ನೇ ತಾರೀಖಿಗೆ ಉತ್ತರ ಸಿಗುತ್ತದೆ ಎಂದರು.
ಬಿಜೆಪಿ ಇನ್ನೂ ಹಲವರು ಬರುತ್ತಾರೆ ಎಂಬ ವಿಷಯ ಗೊತ್ತಿಲ್ಲ. ಬಿಜೆಪಿ ., ಬಿಜೆಪಿಗೆ ಇನ್ನೂ ಹಲವರು ಬರುತ್ತಾರೆ ಎಂದು ಹೇಳಿಕೆ ಕೊಟ್ಟಿದ್ದರೆ ಅದು ಅಧಿಕೃತ ವ್ಯಕ್ತಿ ಹೇಳಿದಂತೆ ಎಂದರು.
ನಾನು ಸತತವಾಗಿ ಏಳು ಸಲ ಪಶ್ಚಿಮ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದೆನೆ ಮತ್ತು ಪ್ರಮಾಣಿಕ ಕೆಲಸ ಸಹ ಮಾಡಿದ್ದಾನೆ. ಈ ಸಲ ಸಹ ಶಿಕ್ಷಕರು ನನಗೆ ಮತ ಹಾಕುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು ‌


Spread the love

About Karnataka Junction

[ajax_load_more]

Check Also

ರಾಜ್ಯ ಬಜೆಟ್ ಮಂಡನೆಗೆ ಸಲಹೆ ಗಳು

Spread the love ಹುಬ್ಬಳ್ಳಿ: ಈ ರಾಜ್ಯದ ಮುಖ್ಯ ಮಂತ್ರಿ ಯಾಗಿ ಹಣಕಾಸು ಸಚಿವ ರಾಗಿ ಈ ಬಾರಿ 16 …

Leave a Reply

error: Content is protected !!