ಚಂಡಿಗಡ : 34 ವರ್ಷಗಳ ಹಿಂದೆ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷ ಕಠಿಣ ಸಜೆಗೆ ಗುರಿಯಾಗಿರುವ ಸಿಧು ಅವರನ್ನು ಪಟಿಯಾಲಾ ಕೇಂದ್ರ ಕಾರಾಗೃಹದ ಕೊಠಡಿ ಸಂಖ್ಯೆ 10ರಲ್ಲಿ ಇರಿಸಲಾಗಿದೆ. ಅವರು ಇತರೆ ಮೂವರು ಜೊತೆ ಕೊಠಡಿಯಲ್ಲಿ ಇದ್ದಾರೆ.
ಸದ್ಯ ಅವರಿಗೆ ಗುಮಾಸ್ತ ಕೆಲಸ ನೀಡಲಾಗಿದೆ. ಅವರಿಗೆ ದಿನಕ್ಕೆ ₹90 ದಿನಗೂಲಿ ನೀಡಲಾಗುವುದು ಎಂದು ಕಾರಾಗೃಹದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ 1 ಗಂಟೆಯವರೆಗೂ ಹಾಗೂ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೂ ಕೆಲಸ ಮಾಡುತ್ತಾರೆ. ಅವರ ಕೊಠಡಿ ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.