ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಮೆಣಸಿನಕಾಯಿ ಅಂಗಡಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ನವನಗರ ಠಾಣೆ ಹಾಗೂ ಕೇಶ್ವಾಪೂರ ಠಾಣೆ ಪೊಲೀಸರು ಯಶಸ್ವಿ

Spread the love

https://youtu.be/QErhWVVJz2c
ಹುಬ್ಬಳ್ಳಿ: ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಮೆಣಸಿನಕಾಯಿ ಅಂಗಡಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ನವನಗರ ಠಾಣೆ ಹಾಗೂ ಕೇಶ್ವಾಪೂರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಾಸನ ಮೂಲದ ಮಹಮ್ಮದ್ ಇಕ್ವಾಲ್(56) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 2.80 ಲಕ್ಷ ನಗದು, ಒಂದು ಸ್ವಿಫ್ಟ್ ಕಾರ್ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ಫೆಬ್ರವರಿ 8ರಂದು ಸೈಯದ್ ಸಾಬ ಲಿಂಬುವಾಲೆ ಎಂಬುವವರ ಮೆಣಸಿನಕಾಯಿ ಅಂಗಡಿಯ ಕೀಲಿ ಮುರಿದು ಒಳ ನುಗ್ಗಿದ್ದ ಆರೋಪಿ ಕ್ಯಾಶ್ ಕೌಂಟರ್ ನಲ್ಲಿದ್ದ 4.86 ಲಕ್ಷ ನಗದು ಕಳ್ಳತನ ಮಾಡಿಕೊಂಡು ಹೋಗಿದ್ದ ಈ ಕುರಿತಂತೆ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಗಂಭೀರವಾಗಿ ಪರಿಗಣಿಸಿದ ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ಪೊಲೀಸರು ಕಾರ್ಯಾಚರಣೆ ಮೂಲಕ ಹಾಸನದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯ ಮೇಲೆ ಈ ಹಿಂದೆ ಸಾಕಷ್ಟು ಪ್ರಕರಣಗಳು ದಾಖಲಾಗಿದ್ದು, ವಿಶೇಷ ಎನೆಂದರೆ ಈತ ಎಪಿಎಂಸಿ ಅಂಗಡಿಗಳನ್ನು ಟಾರ್ಗೆಟ್ ಮಾಡಿ‌ ಕಳ್ಳತನ ಮಾಡುವ ಬಗ್ಗೆ ತನಿಖೆ ವೇಳೆ ಬಯಲಾಗಿದೆ.

ಇನ್ನೂ ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಗಳಾದ ವಿಶ್ವನಾಥ ಚೌಗಲೆ ಹಾಗೂ ಕೇಶ್ವಾಪೂರ ಠಾಣೆಯ ಜಗದೀಶ ಹಂಚಿನಾಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಚಾಲಕಿ ಕಳ್ಳನನ್ನು ಹೆಡೆಮುರಿ ಕಟ್ಟಲಾಗಿದೆ.


Spread the love

About gcsteam

    Check Also

    ಐಎನ್​ಐಎಫ್​ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ

    Spread the loveಹುಬ್ಬಳ್ಳಿ: ನಗರದ ಇಂಟರ್​ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …

    Leave a Reply