Breaking News

ಕನ್ನಡ ಸಾಂಗ್ ಹಾಕಿದ್ದಕ್ಕೆ ಮದುವೆ ಮನೆಯಲ್ಲಿ ಎಂಇಎಸ್ ಪುಂಡಾಟ

Spread the love

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಗೂಂಡಾಗಳು ಪುಂಡಾಟಿಕೆ ಮುಂದುವರೆಸಿದ್ದು ಮದುವೆ ಸಮಾರಂಭದಲ್ಲಿ ಕನ್ನಡ ಹಾಡನ್ನು ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದಾಮಣೆ ಗ್ರಾಮದಲ್ಲಿ ನಡೆದಿದೆ.

ಎಂಇಎಸ್ ಗೂಂಡಾಗಳು ಮತ್ತೆ ಕಿರಕ್ ಮಾಡಿದ್ದಾರೆ. ತಾಲೂಕಿನ ದಾಮಣೆ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು ವಧು-ವರ ಸೇರಿ ಕನ್ನಡಿಗ ಯುವಕರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ವರ ಸಿದ್ದು ಸೈಬಣ್ಣವರ್, ವಧು ರೇಷ್ಮಾ, ವರ ಸಿದ್ದು ತಮ್ಮ ಭರಮಾ ಸೇರಿ ಐವರ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ವಧು-ವರ ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವನಿಗೆ ಗಂಭೀರ ಗಾಯವಾಗಿದ್ದು ಸದ್ಯ ಗಂಭೀರವಾಗಿ ಗಾಯಗೊಂಡ ಓರ್ವನಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Spread the love

About gcsteam

    Check Also

    ಪಾಕಿಸ್ತಾನ ಜಿಂದಾಬಾದ್ ಅಂತಾ ಎಷ್ಟು ಸಲ ಕೂಗಲಾಗಿದೆ, ಎಷ್ಟು ಜನರನ್ನ ಬಂಧನ ಮಾಡಲಾಗಿದೆ- ಸಚಿವ ಲಾಡ್

    Spread the loveಹುಬ್ಬಳ್ಳಿ; ವಿಧಾನ ಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಯಾರೇ ತಪ್ಪು ಮಾಡಲಿ ಕ್ರಮ …

    Leave a Reply