ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ
ಫಲಿತಾಂಶ ಬಂದು ಒಂಬತ್ತು ತಿಂಗಳ ಬಳಿಕ 21ನೇ ಅವಧಿಯ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪ್ರಕ್ರಿಯೆ ಆರಂಙಭವಾಗಿದ್ದು, ವಿರೇಶ ಅಂಚಟಗೇರಿ ಹಾಗೂ ಉಪಮೇಯರ್ ಅಭ್ಯರ್ಥಿಯಾಗಿ ಉಮಾ ಮುಕ್ಕುಂದ ನಾಮಪತ್ತ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಇನ್ನು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುತಿದ್ದಂತೆ
ಕಾಂಗ್ರೆಸ್ ನಿಂದ ಪಾಲಿಕೆಯ ವಾರ್ಡ್ ನಂಬರ್ 24 ರ ಸದಸ್ಯ
ಮೇಯರ್ ಸ್ಥಾನಕ್ಕೆ ಡಾ. ಮಯೂರ ಮೊರೆ, ವಾರ್ಡ್ ನಂಬರ್ 7 ರ ಸದಸ್ಯೆ ದೀಪಾ ನಿರಲಕಟ್ಟಿ ಉಪಮೇಯರ್ ಎಐಎಂಐಎಂದಿಂದ ವಾರ್ಡ್ ನಂಬರ್ 71
ನಜೀರ್ ಹೊನ್ನಾಳ, ಉಪಮೇಯರ್ ಸ್ಥಾನಕ್ಕೆ ವಾರ್ಡ್ ನಂಬರ್ 76 ರ ಸದಸ್ಯೆ ವಹಿದಾಖಾನಂ ಕಿತ್ತೂರು ನಾಮಪತ್ರ ಸಲ್ಲಿಕೆ ಮಾಡಿದರು.
ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿರುವುದರಿಂದ ಆ ಪಕ್ಷದವರಲ್ಲಿ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಬಿಜೆಪಿಯಲ್ಲಿ ಶುಕ್ರವಾರ ತಡತಡರಾತ್ರಿ ತನಕವೂ ಚುರುಕಿನ ಚಟುವಟಿಕೆಗಳು ನಡೆದವು. ಇಲ್ಲಿನ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 9.30 ಮೇಯರ್ ಹಾಗೂ ಉಪ ಮೇಯರ್ ಆಯ್ಕೆಗೆ ಪ್ರಕ್ರಿಯೆ ಸಾಕಷ್ಟು ಚುರುಕಿನ ಚಟುವಟಿಕೆಗಳು ನಡೆದವು.
ಅಧಿಕಾರದ ಚುಕ್ಕಾಣಿ ಹಿಡಿಯಲು ಉಭಯ ಪಕ್ಷಗಳಿಗೂ 42 ಸದಸ್ಯರ ಬಲ ಅಗತ್ಯವಿದೆ. ಪಕ್ಷೇತರರಾಗಿ ಗೆಲುವು ಪಡೆದ ಒಬ್ಬರು ಈ ಹಿಂದೆಯೇ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಈ ಪಕ್ಷದ ಬಲ 40ಕ್ಕೆ ಏರಿಕೆಯಾಗಿತ್ತು. ಇನ್ನು ಜಾತ್ಯಾತೀತ ಜನತಾದಳದ ವಾರ್ಡ್ 25 ರ ಸದಸ್ಯೆ ಲಕ್ಷ್ನೀ ಹಿಂಡಸಗಿರಿ ಭಾರತೀಯ ಜನತಾ ಪಕ್ಷಕ್ಕೆ ಭಾಹ್ಯ ಬೆಂಬಲ ನೀಡಿದರು.
ಪಕ್ಷೇತರ ಅಭ್ಯರ್ಥಿಗಳಾಗಿ ಗೆದ್ದಿರುವ ಚಂದ್ರಿಕಾ ಮೇಸ್ತ್ರಿ ಮತ್ತು ಕಿಶನ್ ಬೆಳಗಾವಿ ಅವರು ಬಿಜೆಪಿ ಸೇರ್ಪಡೆಯಾದರು. ಹೀಗಾಗಿ ಪಕ್ಷದ ಸಂಖ್ಯಾಬಲ ಇನ್ನಷ್ಟು ಹೆಚ್ಚಳವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಾಸಕ ಜಗದೀಶ ಶೆಟ್ಟರ್ ಸಮ್ಮುಖದಲ್ಲಿ ಪಕ್ಷೇತರರು ಬಿಜೆಪಿ ಸೇರ್ಪಡೆಯಾದರು.
ಪ್ರಲ್ಹಾದ ಜೋಶಿ ಮತ್ತು ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಪಾಲಿಕೆಯ ಬಿಜೆಪಿ ಸದಸ್ಯರು ಸುದೀರ್ಘ ಚರ್ಚೆ ನಡೆಸಿದರು. ಜಾತಿ ಲೆಕ್ಕಾಚಾರ ಮತ್ತು ಮುಂಬರುವ ವಿಧಾನಸಭಾ ಚುನಾವಣೆ ಮುಂದಿಟ್ಟುಕೊಂಡು ಅಭಿಪ್ರಾಯ ಸಂಗ್ರಹಿಸಿದರು.
ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಪಾಲಿಕೆ ಸದಸ್ಯರಾದ ಧಾರವಾಡದ ವೀರೇಶ ಅಂಚಟಗೇರಿ, ಹುಬ್ಬಳ್ಳಿಯ ವೀರಣ್ಣ ಸವಡಿ, ವಿಜಯಾನಂದ ಶೆಟ್ಟಿ, ಶಿವು ಮೆಣಸಿನಕಾಯಿ ಅವರ ಹೆಸರುಗಳು ಮುಂಚೂಣಿಯಲ್ಲಿದ್ದವು. ಧಾರವಾಡ ಪ್ರತ್ಯೇಕ ಪಾಲಿಕೆ ಕೂಗು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮೊದಲ ಅವಧಿಗೆ ಮೇಯರ್ ಸ್ಥಾನ ಧಾರವಾಡಕ್ಕೆ ಬಿಟ್ಟುಕೊಡಲು ಸಹ ಒಪ್ಪಂದವಾಗಿದ್ದು ಹುಬ್ಬಳ್ಳಿ ಧಾರವಾಡ ಮಹಾನಗರ ವಾರ್ಡ್ ನಂಬರ್ 3 ನೇ ಸದಸ್ಯ
ವೀರೇಶ ಅಂಚಟಗೇರಿ
ಹಿರಿತನದ ಆಧಾರದ ಮೇಲೆ ಮೇಯರ್ ಸ್ಥಾನ ನೀಡುವುದಾದರೆ ವೀರಣ್ಣ ಸವಡಿಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಆದರೆ, ರಾಜಣ್ಣ ಕೊರವಿ ಕೂಡ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದು, ಪೈಪೋಟಿ ಹೆಚ್ಚಿದೆ. ಬಿಜೆಪಿ ತನ್ನ ಎಲ್ಲಾ ಸದಸ್ಯರಿಗೂ ವಿಪ್ ಜಾರಿ ಮಾಡಿದ್ದು, ಪಕ್ಷ ಸೇರ್ಪಡೆಯಾದ ಚಂದ್ರಿಕಾ ಮೇಸ್ತ್ರಿ ಮತ್ತು ಕಿಶನ್ ಅವರಿಗೆ ಪ್ರಾಥಮಿಕ ಸದಸ್ಯತ್ವ ನೀಡಿ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ಪತ್ರ ಬರೆಯಿಸಿಕೊಂಡಿದ್ದಾರೆ.
ಬಹುಮತದ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಕೂಡ ಕೊನೆಯ ಹಂತದ ಸರ್ಕಸ್ ನಡೆಸುತ್ತಿದ್ದು, ಮೇಯರ್ ಸ್ಥಾನಕ್ಕೆ ಮಯೂರ್ ಮೋರೆ ಹಾಗೂ ಉಪಮೇಯರ್ ಸ್ಥಾನಕ್ಕೆ ದೀಪಾ ಸಂತೋಷ ನೀರಲಕಟ್ಟಿ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.
*ತಡರಾತ್ರಿವರೆಗೂ ಕಸರತ್ರು* ಹುಬ್ಬಳ್ಳಿ ಧಾರವಾಡ ಮಹಾನಗರ
ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಶುಕ್ರವಾರ ತಡರಾತ್ರಿಯವರೆಗೂ ಬಿಜೆಪಿ ಕಸರತ್ತು ನಡೆಸಿತು. ಎಲ್ಲಾ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಶನಿವಾರ ಬೆಳಿಗ್ಗೆ 9 ಗಂಟೆಗೆ ನಿಗದಿಯಾಗಿರುವ ಪಕ್ಷದ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಶುಕ್ರವಾರ ಮೊದಲು ಜೋಶಿ ಹಾಗೂ ಶೆಟ್ಟರ್ ಮೇಯರ್ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಪ್ರದೀಪ ಶೆಟ್ಟರ್, ಲಿಂಗರಾಜ ಪಾಟೀಲ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಕಪಟಕರ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಪಕ್ಷದ ಪಾಲಿಕೆ ಸದಸ್ಯರ ಅಭಿಪ್ರಾಯ ಪಡೆದರು. ಅಲ್ಲಿ ವ್ಯಕ್ತವಾದ ಅಭಿಪ್ರಾಯವನ್ನು ಮುಖಂಡರು ಜೋಶಿ ಹಾಗೂ ಶೆಟ್ಟರ್ ಅವರಿಗೆ ತಿಳಿಸಲಾಗಿತ್ತು.
