ಕೊಪ್ಪಳ: ಸಿದ್ದರಾಮಯ್ಯ ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದರು. ಆರ್ ಎಸ್ ಎಸ್ ಮೂಲ ತಿಳಿದುಕೊಂಡು ಏನಾದರೂ ಮಾಡಬಹುದಿತ್ತು. ಆದರೆ ಆರ್ ಎಸ್ ಎಸ್ ಇಟಲಿಯನ್ ಮೂಲ ಅಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರದ ಹಿಂದೆ ಕಾಂಗ್ರೆಸ್ ಪಿತೂರಿ ಇದೆ. ನಾವು ಹಿಜಾಬ್ ನೋಡುತ್ತಿಲ್ಲ. ಅದರ ಹಿಂದೆ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿರುವ ಕಾಣದ ಕೈಗಳನ್ನು ನೋಡುತ್ತಿದ್ದೇವೆ. ಈ ದೇಶದ ಕಾನೂನು ಉಲ್ಲಂಘನೆ ಮಾಡೋ ಪಿತೂರಿ ನೋಡುತ್ತಿದ್ದೇವೆ. ಇವತ್ತಲ್ಲ ನಾಳೆ ಇವರು ಇಡೀ ದೇಶದ ಕಾನೂನು ಉಲ್ಲಂಘನೆ ಮಾಡುತ್ತೇವೆ ಅನ್ನುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ಇಟಲಿಯನ್ ಮೂಲ, ಆರ್ ಎಸ್ ಎಸ್ ಅಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ಕೆಲವು ರಾಜಕೀಯ ಪಕ್ಷಗಳು ಅವರ ವೋಟ್ ಬ್ಯಾಂಕ್ ಗಾಗಿ ಅವರನ್ನು, ಅವರ ವಿಚಾರಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಈ ದೇಶದ ಇತಿಹಾಸವನ್ನು ಮಕ್ಕಳಿಗೆ ತಿಳಿಸುವುದರಲ್ಲಿ ಎಡವಟ್ಟಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಗ್ರಾಮಗಳ ಜನರು ಭಾಗಿಯಾಗಿದ್ದಾರೆ. ಇತಿಹಾಸದ ಪುಸ್ತಕಗಳ ರಚನೆಯಲ್ಲಿ ಲೋಪವಾಗಿದ್ದು, ಮುಂಬರುವ ದಿನಗಳಲ್ಲಿ ವಿಭಿನ್ನ ಕಾರ್ಯಕ್ರಮದ ಮೂಲಕ ನಾವು ನಿಜವಾದ ಇತಿಹಾಸ ಪರಿಚಯಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.ಪಠ್ಯ ಪುಸ್ತಕ ವಿವಾದ ವಿಚಾರವಾಗಿ ಮಾತನಾಡಿದ ಅವರು, ರಾಷ್ಟ್ರೀಯತೆ, ಹಿಂದುತ್ವ ಸಹಿಸಿಕೊಳ್ಳದ ಅವರು ಸುಖಾ ಸುಮ್ಮನೆ ವಿವಾದ ಸೃಷ್ಟಿಸಿದ್ದಾರೆ. ನಮ್ಮೆಲ್ಲ ಹೊಸ ವಿಚಾರಗಳಿಗೆ ಅವರ ಸದಾ ವಿರೋಧಿಸುತ್ತಲೇ ಬಂದಿದ್ದಾರೆ. ಇದೀಗ ಪಠ್ಯ ಪುಸ್ತಕದ ಸರದಿ. ಅದರಲ್ಲೂ ವಿವಾದ ಹುಟ್ಟು ಹಾಕಿದ್ದಾರೆ. ವಿಷಯಗಳೇನು ಸಿಗದಿದ್ದಾಗ ಜಾತಿ ಬಗ್ಗೆ ಮಾತನಾಡುತ್ತಾರೆ. ಬ್ರಿಟಿಷರ ಕಾಲದಿಂದಲೂ ಇದು ನಡೆದುಕೊಂಡು ಬಂದಿದೆ ಎಂದು ಹೇಳಿದರು.
ಈ ದೇಶದ ಜನರಿಗೆ ಯಾವುದು ನಿಜ,ಯಾವುದು ಸುಳ್ಳು ಎನ್ನುವುದು ಗೊತ್ತಿದೆ. ಮೊದಲು ಟಿಪ್ಪು, ಭಗತ್ ಸಿಂಗ್, ನಾರಾಯಣ ಗುರು, ಬಸವಣ್ಣ ಅವರ ವಿಚಾರಗಳನ್ನು ಪಠ್ಯದಿಂದ ತೆಗೆದು ಹಾಕಿದ್ದಾರೆ ಎಂದು ಸುಳ್ಳು ಹೇಳಿದರು. ಆ ಮೂಲಕ ಹಿಂದೂ ಸಮಾಜವನ್ನು ಒಡೆದಾಳುವ ಕೆಲಸ ಮಾಡಲಾಗುತ್ತಿದೆ. ಬ್ರಿಟಿಷರಿಂದ ಅಧಿಕಾರ ವಹಿಸಿಕೊಂಡ ದಿನದಿಂದ ಕಾಂಗ್ರೆಸ್ ನವರು ಮಾಡಿದ್ದು ಇದನ್ನೇ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹರಿಹಾಯ್ದಿದ್ದಾರೆ.
Check Also
ಜಿಲ್ಲಾ ಉಸ್ತುವಾರಿ ಕ್ಷೇತ್ರದಲ್ಲಿಯೇ ಕೈ ಅಭ್ಯರ್ಥಿ ವಿನೋದ ಅಸೂಟಿಗೆ ಹಿನ್ನಡೆ
Spread the loveಗೆಲುವು ಸಾಧಿಸುತಿದ್ದಂತೆ ದೆಹಲಿಗೆ ತೆರಳಿದ ಪ್ರಲ್ಹಾದ್ ಜೋಶಿ ವಿವಿಧ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದ ನೂತನ ಸಂಸದರು …