Breaking News

ಜೂನ್ 5ರಿಂದ ರಾಜ್ಯದಲ್ಲಿ ಮುಂಗಾರು ಪ್ರವೇಶ

Spread the love

ಬೆಂಗಳೂರು: ರಾಜ್ಯದಲ್ಲಿ ಜೂನ್ 5ಕ್ಕೆ ಮುಂಗಾರು ಪ್ರವೇಶ ಆರಂಭವಾಗಲಿದೆ. ಹಲವು ಕಾರಣಗಳಿಂದ ಮುಂಗಾರು ವಿಳಂಬವಾಗಿದ್ದು, ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ. ನಂತರ ಜೂನ್ 5ರಂದು ರಾಜ್ಯದಲ್ಲೂ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇರಳಕ್ಕೆ ಮೇ 27ರಂದೇ ಮುಂಗಾರು ಪ್ರವೇಶ ಮಾಡಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಮುಂಗಾರು ವಿಳಂಬವಾಗಲಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಇಡೀ ಮಾಲ್ಡೀವ್ಸ್, ಲಕ್ಷದ್ವೀಪದ ಪಕ್ಕದ ಪ್ರದೇಶಗಳು ಹಾಗೂ ಕೊಮೊರಿನ್‌ನ ಕೆಲವೆಡೆ ನೈಋತ್ಯ ಮುಂಗಾರು ಮತ್ತಷ್ಟು ಪ್ರವೇಶ ಪಡೆಯುವ ನಿರೀಕ್ಷೆ ಇದೆ. ಈ ವಾರದಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲು ಪೂರಕವಾದ ವಾತಾವರಣವಿದೆ ಎಂದು ಇಲಾಖೆ ಹೇಳಿದೆ.ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ವಾಡಿಕೆಗಿಂತ ಮೊದಲೇ ಅಂದರೆ ಮೇ 16ರಂದು ಅಂಡಮಾನ್ ಅನ್ನು ಮುಂಗಾರು ತಲುಪಿತ್ತು. ಆದರೆ, ಆರು ದಿನಗಳ ವಿರಾಮದ ಬಳಿಕ ಈಗ ಶ್ರೀಲಂಕಾದಿಂದ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಮಾನ್ಸೂನ್ ಜೂನ್ 1ರಂದು ಕೇರಳ ರಾಜ್ಯವನ್ನು ಪ್ರವೇಶಿಸಿದರೆ, ಜೂನ್ 5ರಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳನ್ನು ಮುಟ್ಟಲಿದೆ. ಜೂನ್ 10ರ ವೇಳೆಗೆ ಅದು ಇಡೀ ರಾಜ್ಯವನ್ನು ಆವರಿಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.


Spread the love

About Karnataka Junction

[ajax_load_more]

Check Also

ಚಿರತೆಯಗಳ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ನಕಲಿ- ಆರ್ ಎಫ್ ಓ ಉಪ್ಪಾರ

Spread the loveಹುಬ್ಬಳ್ಳಿ: ಕಳೆದ ನಾಲ್ಕರು ದಿನಗಳಿಂದ ಕಾಡಿನ ಪ್ರಾಣಿ ಚಿರತೆಯಗಳ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತನದಲ್ಲಿ ಹರಿ ಬಿಡುತ್ತಿದ್ದು …

Leave a Reply

error: Content is protected !!